BengaluruPolitics

ಬೆಂಗಳೂರಿಗೆ ಬಂದ ಯೋಗಿ.. ನಾಳೆ ರಾಜ್ಯಕ್ಕೆ ಮೋದಿ

ಬೆಂಗಳೂರು; ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರು ಬೆಂಗಳೂರಿಗೆ ಆಗಮಿಸುತ್ತಾರೆ. ನೆಲಮಂಗಲ ಬಳಿ ಇರುವ ಧರ್ಮಸ್ಥಳದ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ 12 ಗಂಟೆಗೆ ನೂತನ ಪ್ರಕೃತಿ ಚಿಕಿತ್ಸಾ ಕೇಂದ್ರ ಕ್ಷೇಮವನದ ಉದ್ಘಾಟನೆ ನೆರವೇರಿಸುವರು.

   ರಾಜ್ಯಸಭಾ ಸದಸ್ಯರಾಗಿ ನೇಮಕಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರ ಮನವಿ ಮೇರೆಗೆ ಯುಪಿ ಸಿಎಂ ರಾಜ್ಯಕ್ಕೆ ಅಗಮಿಸುತ್ತಿದ್ದಾರೆ. ಇಂದು ಬೆಳಗ್ಗೆ ಉತ್ತರ ಪ್ರದೇಶದಿಂದ ಹೊರಟು ಮಧ್ಯಾಹ್ನ 11.30ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಅಗಮಿಸುವರು, ನಂತರ 11.55ಕ್ಕೆ ಎಸ್​ಡಿಎಮ್ ಕೇಂದ್ರಕ್ಕೆ ತೆರಳಲಿದ್ದಾರೆ. ಈ ಸಮಾರಂಭದ ಬಳಿಕ ಆದಿತ್ಯನಾಥ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಮಾತುಕತೆ ನಡೆಸಲಿದ್ದಾರೆ.

  ಇನ್ನು ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಮೋದಿಯವರು ಸುಮಾರು 3,800 ಕೋಟಿ ರೂಪಾಯಿ ವೆಚ್ಚದ ಯಾಂತ್ರೀಕರಣ ಮತ್ತು ಕೈಗಾರಿಕೀಕರಣ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Share Post