Bengaluru

ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು; ದಕ್ಷಿಣ ಭಾರತದ ಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಕೆಂಪೇಗೌಡ ರೈಲು ನಿಲ್ದಾಣದಲ್ಲಿ ವಂದೇ ಭಾರತ್‌ ರೈಲಿಗೆ ಚಾಲನೆ ನೀಡಲಾಗಿದ್ದು, ಇಂದಿನಿಂದ ಈ ರೈಲು ಸಂಚಾರ ಮಾಡಲಿದೆ.

ರೈಲಿಗೆ ಚಾಲನೆ ಹಿನ್ನೆಲೆಯಲ್ಲಿ ರೈಲು ನಿಲ್ದಾಣವನ್ನು ಹೂವುಗಳಿಂದ ವಿಶೇಷವಾಗಿ ಸಿಂಗರಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸುವ ಮೂಲಕ ರೈಲಿಗೆ ಚಾಲನೆ ನೀಡಿದರು. ಈ ರೈಲು, ಚೆನ್ನೈ-ಮೈಸೂರು ಮಾರ್ಗವಾಗಿ ಸಂಚಾರ ಮಾಡಲಿದೆ.

ಈ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

Share Post