ಹಿರಿಯ ನಟ ಬ್ಯಾಂಕ್ ಜನಾರ್ದನ್‌ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
ಬೆಂಗಳೂರು; ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ದನ್‌ಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಚಿಕಿತ್ಸೆ ಮುಂದುವರೆದಿದ್ದು, ಬೇಗ ಗುಣಮುಖರಾಗಲೆಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ತಂದೆಯ ಆರೋಗ್ಯದ ಬಗ್ಗೆ ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ. ತಂದೆ ಆರೋಗ್ಯವಾಗಿದ್ದಾರೆ. ಯಾರೂ ಹೆದರಬೇಕಾದ ಅವಶ್ಯಕತೆ ಇಲ್ಲ. ಅಂಜಿಯೋಗ್ರಾಮ್ ಮಾಡಲಾಗುತ್ತಿದೆ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ.