BengaluruHealth

ಹಿರಿಯ ಪತ್ರಕರ್ತ ಸಚ್ಚಿದಾನಂದ ಮೂರ್ತಿ ಇನ್ನಿಲ್ಲ

ಬೆಂಗಳೂರು; ಮಾಧ್ಯಮ ವಲಯದಲ್ಲಿ ಸಚ್ಚಿ ಎಂದೇ ಹೆಸರಾಗಿದ್ದ ಹಿರಿಯ ಪತ್ರಕರ್ತ ಕೆ.ಎಸ್. ಸಚ್ಚಿದಾನಂದ ಮೂರ್ತಿ ನಿಧನರಾಗಿದ್ದಾರೆ. ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ ಅವರು, ಕೆಲ ದಿನಗಳ ಹಿಂದೆ ಶ್ವಾಸಕೋಶ ಕಸಿಗೆ ಒಳಗಾಗಿದ್ದರು. ಆದ್ರೆ ಅದು ಫಲಪ್ರದವಾಗದೇ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧಿನರಾಗಿದ್ದಾರೆ.

ಸಚ್ಚಿದಾನಂದ ಮೂರ್ತಿಯವರು ರು 1982 ರಲ್ಲಿ ದಿ ವೀಕ್ ಸೇರಿದ್ದು, ಸ್ಥಾನಿಕ ಸಂಪಾದಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಮಲಯಾಳ ಮನೋರಮಾದಲ್ಲೂ ಕಾರ್ಯನಿರ್ವಹಿಸಿದ್ದರು. ಕೋಲಾರ ಮೂಲದವರಾದ ಸಚ್ಚಿದಾನಂದ ಅವರು ಕಳೆದ ವರ್ಷವಷ್ಟೇ ಮಾಧ್ಯಮ ವೃತ್ತಿ ನಿವೃತ್ತಿ ಹೊಂದಿದ್ದರು. ನ್ಯೂ ಡೆಲ್ಲಿ ಅಂಕಣದ ಮೂಲ ಖ್ಯಾತರಾಗಿದ್ದ ಸಚ್ಚಿದಾನಂದ ಮೂರ್ತಿಯವರು, ದೆಹಲಿಯಲ್ಲಿ 4 ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ಎಡಿಟರ್ಸ್ ಗಿಲ್ಡ್ ಪ್ರಧಾನ ಕಾರ್ಯದರ್ಶಿಯಾಗಿ ಕೂಡಾ ಸೇವೆ ಸಲ್ಲಿಸಿದ್ದರು.

ರಾಷ್ಟ್ರೀಯ, ಅಂತಾರಾಷ್ಟ್ರೀಯ ರಾಜಕೀಯ ವಿದ್ಯಮಾನಗಳನ್ನು ಬಹಳ ಅಚ್ಚುಕಟ್ಟಾಗಿ ವಿಶ್ಲೇಷಣೆ ಮಾಡುತ್ತಿದ್ದರು. ಸಚ್ಚಿಯವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸಚ್ಚಿದಾನಂದ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಈ ಬಗ್ಗೆ ಅವರು ಟ್ವೀಟ್‌ ಮಾಡಿದ್ದಾರೆ. ಹಿರಿಯ ಪತ್ರಕರ್ತ, ‘ಮಲಯಾಳ ಮನೋರಮಾ’ ಮತ್ತು ‘ದಿ ವೀಕ್’ ಪತ್ರಿಕೆಗಳ ಮಾಜಿ ಸ್ಥಾನೀಯ ಸಂಪಾದಕರಾಗಿದ್ದ ಕೆ.ಎಸ್.ಸಚ್ಚಿದಾನಂದಮೂರ್ತಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನಗೆ ಆತ್ಮೀಯರು ಮತ್ತು ಹಿತೈಷಿಗಳಾಗಿದ್ದ ಸಚ್ಚಿದಾನಂದಮೂರ್ತಿಯವರು ದೆಹಲಿಯ ಮಾಧ್ಯಮರಂಗದಲ್ಲಿ ಸಕ್ರಿಯರಾಗಿದ್ದ ಕೆಲವೇ ಕೆಲವು ಹಿರಿಯ ಕನ್ನಡಿಗ ಪತ್ರಕರ್ತರಲ್ಲಿ ಒಬ್ಬರಾಗಿದ್ದರು.
ರಾಜ್ಯ-ರಾಷ್ಟ್ರಗಳ ವಿದ್ಯಮಾನಗಳ ಜ್ಞಾನಕೋಶದಂತಿದ್ದ ಸಚ್ಚಿದಾನಂದ ಮೂರ್ತಿಯವರ‌ ಸಾವು ಮಾಧ್ಯಮರಂಗಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ ಮತ್ತು ಸ್ನೇಹಿತರ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

Share Post