ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ವಿಕ್ಟೋರಿಯಾ ವೈದ್ಯ ಆತ್ಮಹತ್ಯೆ
ಬೆಂಗಳೂರು; ವಿಕ್ಟೋರಿಯಾ ಆಸ್ಪತ್ರೆ ವೈದ್ಯ ಪೃಥ್ವಿರಾಜ್ ರೆಡ್ಡಿ ಎಂಬುವವರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಮೃತಹಳ್ಳಿಯ ಅಪಾರ್ಟ್‌ಮೆಂಟ್‌ನಿಂದ ಬಿದ್ದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೃಥ್ವಿರಾಜ್ ರೆಡ್ಡಿಯವರು ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ವೈದ್ಯೆಯೊಬ್ಬರನ್ನು ಮದುವೆಯಾಗಿದ್ದ ಅವರು ಅಮೃತಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿದ್ದರು. ಆದ್ರೆ, ಅವರು ಇಂದು ಇದ್ದಕ್ಕಿದ್ದಂತೆ ಆತ್ಮಹತ್ಯೆ ಶರಣಾಗಿದ್ದಾರೆ.