ಟಾಯ್ಲೆಟ್‌ನಲ್ಲಿ ವಿಡಿಯೋ ಚಿತ್ರೀಕರಣ; ಸತ್ಯಾಸತ್ಯತೆ ತಿಳಿಯಲು ಪೊಲೀಸರಿಗೆ ಹೇಳಿದ್ದೇನೆ – ಸಚಿವ ಜಿ.ಪರಮೇಶ್ವರ್
ಬೆಂಗಳೂರು; ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಬೇರೆ ಕೋನಕ್ಕೆ ಕೊಂಡೊಯ್ಯಲಾಗಿದೆ. ಈ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ಪರಿಶೀಲನೆ ಮಾಡಲು ನಾನು ಕೂಡಾ ಪೊಲೀಸರಿಗೆ ಸೂಚನೆ ಕೊಟ್ಟಿದ್ದೇನೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಪ್ರತಿಕ್ರಿಯೆ ನೀಡಿರುವ ಅವರು, ಮಿತಿಮೀರಿದ ಘಟನೆ ಏನಾದರೂ ನಡೆದಿದ್ದರೆ ನಾವು ಮುಂದೆ ಹೋಗಬಹುದಾಗಿತ್ತು. ಆದ್ರೆ ಸ್ನೇಹಿತರ ನಡುವೆ ಕೆಲ ಘಟನೆಗಳು ನಡೆಯುತ್ತವೆ. ಅದನ್ನು ನಿಯಂತ್ರಿಸಲು ಕಾಲೇಜು ಪ್ರಾಂಶುಪಾಲರಿಗೆ ಬಿಡಬೇಕು ಎಂದು ಹೇಳಿದರು.
ಈಗಾಗಲೇ ಕಾಲೇಜು ಆಡಳಿತ ಮಂಡಳಿ ಕ್ರಮ ಕೈಗೊಂಡಿದೆ.. ವಿಶ್ವವಿದ್ಯಾಲಯದಲ್ಲಿ ಆಂಟಿ ರ್ಯಾಗಿಂಗ್ ಕಮಿಟಿ ಕೂಡಾ ಇದೆ. ಅಲ್ಲಿ ಕೂಡಾ ಈ ಪ್ರಕರಣವನ್ನು ಹ್ಯಾಂಡಲ್ ಮಾಡಬಹುದು. ಕಾಲೇಜು ಆಡಳಿತ ಮಂಡಳಿ ಕೂಡಾ ವಿದ್ಯಾರ್ಥಿನಿಯರನ್ನು ಸಸ್ಪೆಂಡ್ ಮಾಡಿದ್ದಾರೆ. ಹೀಗಿರುವಾಗ ಹೆಚ್ಚಿನ ರೀತಿಯಲ್ಲಿ ಬಿಂಬಿಸಲು ಹೊರಟಿದ್ದಾರೆ. ಹೀಗಾಗಿ ಪೊಲೀಸರು ಸತ್ಯಾಸತ್ಯತೆ ನೋಡಲು ಮುಂದಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಘಟನೆಯನ್ನು ಬೇರೆ ರೀತಿಯಲ್ಲಿ ಅರ್ಥೈಸಬಾರದು ಎಂದೂ ಗೃಹಸಚಿವರು ಹೇಳಿದ್ದಾರೆ.