BengaluruPolitics

ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ ಕನಕಪುರದ ವಿಶ್ವನಾಥ್‌

ಬೆಂಗಳೂರು; ಕನಕಪುರದಲ್ಲಿ ಡಿ.ಕೆ.ಶಿವಕುಮಾರ್‌ ವಿರುದ್ಧ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದು ಪ್ರಬಲ ಪೈಪೋಟಿ ನೀಡಿದ್ದ ವಿಶ್ವನಾಥ್‌ ಅವರು ಇಂದು ಕಾಂಗ್ರೆಸ್‌ ಪಕ್ಷ ಸೇರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್‌ ಮುಖಂಡರ ಸಮ್ಮುಖದಲ್ಲಿ ವಿಶ್ವನಾಥ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಇದರ ಜೊತೆಗೆ ರಾಧಾಕೃಷ್ಣ ಸೇರಿ ಹಲವು ನಾಯಕರು ಇಂದು ಕಾಂಗ್ರೆಸ್‌ಗೆ ಸೇರಿದರು.

ಇದೇ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ವಿಶ್ವನಾಥ್‌ ಅವರ ತಂದೆ ಹಾಗೂ ತಾತ ನನ್ನ ಪರವಾಗಿ ಕೆಲಸ ಮಾಡಿದ್ದಾರೆ. ವಿಶ್ವನಾಥ್‌ ಅವರು 2008ರ ಚುನಾವಣೆಯಲ್ಲಿ ನನ್ನ ವಿರುದ್ಧ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಏಳು ಸಾವಿರ ಮತಗಳ ಅಂತರದಿಂದ ಸೋತಿದ್ದರು. ಈಗ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವುದು ನಮಗೆ ಆನೆಬಲ ಬಂದಂತಾಗಿದೆ ಎಂದು ಹೇಳಿದರು. ವಿಶ್ವನಾಥ್‌ ಅವರು ಜೆಡಿಎಸ್‌ನಲ್ಲಿ ನಾಯಕತ್ವ ಬೆಳೆಸಿಕೊಳ್ಳಲು ಹೋಗಿದ್ರು. ಆದ್ರೆ ಈಗ ರಾಜ್ಯ, ನಮ್ಮ ಜಿಲ್ಲೆ ಹಾಗೂ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಮರಳಿ ಸೇರಿದ್ದಾರೆ. ವೇದಿಕೆ ಮೇಲಿರುವ ಎಲ್ಲರ ಸಮ್ಮುಖದಲ್ಲಿ ನಾನು ಕಾಂಗ್ರೆಸ್ ಪಕ್ಷದ ಪರವಾಗಿ ಪಕ್ಷಕ್ಕೆ ಸೇರುತ್ತಿರುವವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇವತ್ತು ರಾಮನಗರ ಹಾಗೂ ಮಂಡ್ಯ ಭಾಗದ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಜೆಡಿಎಸ್‌ ಮುಖಂಡ ರಾಧಾಕೃಷ್ಣ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

Share Post