BengaluruPolitics

ಖರ್ಗೆ ಬಳಿಕ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ವಿಶ್ವನಾಥ್

ಬೆಂಗಳೂರು; ಮೊನ್ನೆಯಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದ ಎಚ್‌.ವಿಶ್ವನಾಥ್‌ ಅವರು ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆದಿದ್ದ ಸಿದ್ದರಾಮಯ್ಯರನ್ನು ಭೇಟಿಯಾಗಿ ಅವರು ಆರೋಗ್ಯ ವಿಚಾರಿಸಿದರು.

ಚುನಾವಣೆ ಸಮಯದಲ್ಲಿ ವಿಶ್ವನಾಥ್‌ ಅವರು ಕಾಂಗ್ರೆಸ್‌ ನಾಯಕರನ್ನು ಭೇಟಿಯಾಗುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ವಿಶ್ವನಾಥ್ ಕಾಂಗ್ರೆಸ್ ಸೇರ್ತಾರೆ ಎಂಬ ಚರ್ಚೆ ಇದೀಗ ಎಲ್ಲೆಡೆ ನಡೆಯುತ್ತಿದೆ.

Share Post