BengaluruPolitics

ಸಂಜೆ ದೆಹಲಿಯಿಂದ ವೀಕ್ಷಕರ ಆಗಮನ; ಬಿಜೆಪಿ ಶಾಸಕಾಂಗ ಸಭೆ ನಾಳೆಗೆ ಮುಂದೂಡಿಕೆ

ಬೆಂಗಳೂರು; ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿಯಲ್ಲಿ ಕಸರತ್ತು ಮುಂದುವರೆದಿದೆ. ವಿಪಕ್ಷ ನಾಯಕನಾಗಿ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಬಿಜೆಪಿ ನಾಯಕರಲ್ಲಿ ಗೊಂದಲ ಮೂಡಿದೆ. ಇಂದು ಸಂಜೆ ವಿಪಕ್ಷ ನಾಯಕನ ಆಯ್ಕೆ ಮಾಡುವ ಸಂಬಂಧ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿತ್ತು. ಆದ್ರೆ. ಇದೀಗ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ. ನಾಳೆ ಬೆಳಗ್ಗೆ 9 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನಾಳೆಯೇ ವಿರೋಧ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ.

ಅಂದಹಾಗೆ, ಇಂದು ಸಂಜೆ 6 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿತ್ತು. ಆದ್ರೆ, ಇಂದು ಸಂಜೆ ದೆಹಲಿಯಿಂದ ವೀಕ್ಷಕರು ಆಗಮಿಸುತ್ತಿದ್ದಾರೆ. ಅವರು ಬರುವುದು ಲೇಟಾಗುವುದರಿಂದ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ.

 

Share Post