ಸಂಪುಟ ವಿಸ್ತರಣೆ ಸರ್ಕಸ್; ಪ್ರತ್ಯೇಕ ಪಟ್ಟಿಯೊಂದಿಗೆ ಡಿಕೆಶಿ, ಸಿದ್ದು ದೆಹಲಿಗೆ
ಬೆಂಗಳೂರು; ಸಿಎಂ, ಡಿಸಿಎಂ ಪ್ರಮಾಣವಚನ ಕಾರ್ಯಕ್ರಮದಲ್ಲೇ 28ಕ್ಕೂ ಹೆಚ್ಚು ಸಚಿವರ ಪ್ರಮಾಣವಚನ ಸ್ವೀಕಾರಕ್ಕೆ ತೀರ್ಮಾನ ಆಗಿತ್ತು. ಆದ್ರೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಒಮ್ಮತ ಮೂಡದ ಕಾರಣ, ಮೊದಲ ಹಂತದಲ್ಲಿ ಎಂಟು ಮಂದಿಗೆ ಮಾತ್ರ ಸಂಪುಟದಲ್ಲಿ ಅವಕಾಶ ನೀಡಲಾಗಿತ್ತು. ಈಗ ಎಡರನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತು ನಡೆಯುತ್ತಿದೆ. ಇಂದು ಸಂಜೆ 6.30ಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ.
ಇಂದು ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಲಿದ್ದಾರೆ. ಎರಡನೇ ಹಂತದಲ್ಲಿ 20 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಇಬ್ಬರೂ ನಾಯಕರು ತಮ್ಮ ಬೆಂಬಲಿಗರ ಪಟ್ಟಿಯನ್ನು ಸಿದ್ದ ಮಾಡಿಕೊಂಡಿದ್ದಾರೆ. ಇಬ್ಬರೂ ಪ್ರತ್ಯೇಕ ಪಟ್ಟಿಗಳನ್ನು ಹಿಡಿದುಕೊಂಡು ದೆಹಲಿಗೆ ತೆರಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಇದಕ್ಕೂ ಮೊದಲು ಸಿದ್ದರಾಮಯ್ಯ ಅವರು ತಮ್ಮ ಆಪ್ತರೊಂದಿಗೆ ಸಂಪುಟ ವಿಸ್ತರಣೆ ಬಗ್ಗೆ ಗೌಪ್ಯವಾಗಿ ಚರ್ಚೆ ಕೂಡಾ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.