Bengaluru

ಶಾಲೆಗಳಲ್ಲಿ ಇಸ್ಲಾಂ ಹಬ್ಬಗಳಿಗೂ ಅವಕಾಶ ನೀಡಲು ವಕ್ಫ್‌ ಬೋರ್ಡ್‌ ಮನವಿ; ಶಿಕ್ಷಣ ಸಚಿವರು ಹೇಳಿದ್ದೇನು..?

ಬೆಂಗಳೂರು; ಶಾಲೆಗಳಲ್ಲಿ ಗಣೇಶೋತ್ಸವ ಆಚರಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿರುವುದರಿಂದ ಇಸ್ಲಾಂ ಹಬ್ಬಗಳ ಆಚರಣೆಗೂ ಅವಕಾಶ ನೀಡಬೇಕೆಂದು ವಕ್ಫ್‌ ಬೋರ್ಡ್‌ ಮನವಿ ಮಾಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಕ್ಫ್‌ ಬೋರ್ಡ್‌ ಅಧ್ಯಕ್ಷ ಶಫಿ ಸಅಧಿ, ಶಾಲೆಗಳಲ್ಲಿ ನಮಾಜ್‌ಗೆ ಪ್ರತ್ಯೇಕ ಕೊಠಡಿ ಮೀಸಲಿಡಿ ಎಂದು ಮನವಿ ಮಾಡಿದ್ದಾರೆ.

ಶಾಲೆಗಳಲ್ಲಿ ಎಲ್ಲಾ ಧರ್ಮದ ಮಕ್ಕಳಿಗೂ ಸಮಾನ ಅವಕಾಶ ನೀಡಬೇಕು. ಗಣೇಶೋತ್ಸವದ ರೀತಿ ಈದ್‌ ಮಿಲಾದ್‌ಗೂ ಅವಕಾಶ ಕೊಡಬೇಕು. ಪ್ರತಿ ಮಕ್ಕಳಿಗೂ ಧರ್ಮದ ಅರಿವು, ಧಾರ್ಮಿಕ ಪಾಠ ಬೇಕು ಎಂದು ವಕ್ಫ್‌ ಬೋರ್ಡ್‌ ಅಧ್ಯಕ್ಷರು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, ಶಾಲೆಗಳಲ್ಲಿ ಯಾವುದೇ ಧರ್ಮದ ಆಚರಣೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ವಕ್ಫ್‌ ಬೋರ್ಡ್‌ ಬೇಡಿಕೆಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಪುರಸ್ಕರಿಸುವುದಿಲ್ಲ. ಸ್ವಾತಂತ್ರ್ಯಪೂರ್ವದಿಂದಲೂ ಶಾಲೆಗಳಲ್ಲಿ ಗಣಪತಿ ಇಡಲಾಗುತ್ತಿದೆ. ಇದನ್ನು ನಾವು ಮಾಡಿದ್ದಲ್ಲ ಎಂದು ಶಿಕ್ಷಣ ಸಚಿವರು ಸ್ಪಷ್ಟನೆ ನೀಡಿದ್ದಾರೆ.

Share Post