Bengaluru

ನವೆಂಬರ್‌ 6ಕ್ಕೆ ಬೆಂಗಳೂರಿಗೆ ಖರ್ಗೆ; ಅದ್ದೂರಿ ಸ್ವಾಗತಕ್ಕೆ ಕೆಪಿಸಿಸಿ ಸಿದ್ಧತೆ

ಬೆಂಗಳೂರು; ಎಐಸಿಸಿ ಅಧ್ಯಕ್ಷರಾದ ಮೇಲೆ ಮಲ್ಲಿಕಾರ್ಜುನ ಖರ್ಗೆ ಅವರು ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದಾರೆ. ನವೆಂಬರ್‌ ಆರರಂದು ಅವರು ಬೆಂಗಳೂರಿಗೆ ಬರಲಿದ್ದು, ಅದ್ದೂರಿ ಸ್ವಾಗತಕ್ಕೆ ಸಿದ್ಧತೆ ನಡೆಸಲಾಗಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಬೇರೆ ರಾಜ್ಯಗಳಿಗೆ ಪ್ರವಾಸ ಹೋಗುವ ಮುನ್ನ ರಾಜ್ಯಕ್ಕೆ ಬರುತ್ತಿದ್ದಾರೆ. ಮೊದಲು ನಮ್ಮ ರಾಜ್ಯಕ್ಕೇ ಬರಬೇಕೆಂದು ನಮ್ಮ ಮನವಿ ಹಿನ್ನೆಲೆಯಲ್ಲಿ ಅವರು ರಾಜ್ಯಕ್ಕೆ ಬರುತ್ತಿದ್ದಾರೆ. ನವೆಂಬರ್‌ ಆರರಂದು ಬೆಳಗ್ಗೆ 10.50ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.35ಕ್ಕೆ ಅರಮನೆ ಮೈದಾನದಲ್ಲಿ ಸರ್ವೋದಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Share Post