Bengaluru

ನೂತನ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳ ಸ್ಥಾಪನೆ ಇಲ್ಲ : ಅಶ್ವಥ್‌ ನಾರಾಯಣ್‌

ಬೆಂಗಳೂರು : ರಾಜ್ಯದಲ್ಲಿ ಹೊಸ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳನ್ನು ಸ್ಥಾಪಿಸುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್‌ ನಾರಾಯಣ್‌ ಇಂದು ವಿಧಾನಸಭೆಯಲ್ಲಿ ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ರಮೇಶ್‌ ಅವರು ಕೇಳಿದ ಪ್ರಶ್ನೆಗೆ ಉತ್ತರವಾಗಿ ಈ ವಿಷಯ ಹೇಳಿದರು.

ಪ್ರಸ್ತುತ ರಾಜ್ಯದಲ್ಲಿ ಇರುವ ಸರ್ಕಾರಿ ಕಾಲೇಜುಗಳಲ್ಲಿ ಶೇ 50 ರಿಂದ ಶೇ70 ರಷ್ಟು ಎಂಜಿನಿಯರಿಂಗ್‌ ಸೀಟುಗಳು ಭರ್ತಿ ಆಗದೇ ಖಾಲಿ ಉಳಿದಿವೆ. ಈಗ ಮತ್ತೆ ಹೊಸ ಕಾಲೇಜುಗಳನ್ನು ಸ್ಥಾಪಿಸುವುದು ಎಂದರೆ ಅರ್ಥವಿಲ್ಲ ಎಂದು ಅಶ್ವಥ್‌ ನಾರಾಯಣ್‌ ಹೇಳಿದ್ದಾರೆ.

ಏಐಸಿಟಿಇ ನಿಯಮಗಳ ಪ್ರಕಾರ ಈಗಾಗಲೇ ರಾಜ್ಯದಲ್ಲಿರುವ ಎಂಜಿನಿಯರಿಂಗ್‌ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಒತ್ತು ನೀಡಲಾಗುತ್ತಿದೆ ಹಾಗೆಯೇ ಈ ಸಂಸ್ಥೆಗಳನ್ನು ಬಲವರ್ಧಿಸಲು ಉದ್ಧೇಶಿಸಲಾಗುತ್ತಿದೆ ಎಂದು ಹೇಳಿದರು.

Share Post