Bengaluru

ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಗ್ಯಾರೆಂಟಿಗಳನ್ನು ಜಾರಿ ಮಾಡಿದ್ದೇವೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು; ನಾವು ಈಗ ಅಭಿವೃದ್ಧಿಯ ಪಥದತ್ತ ಸಾಗುತ್ತಿದ್ದೇವೆ. ಈಗಾಗಲೇ ನಮ್ಮ ದೇಶ ಅನೇಕ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿಯನ್ನು ಹೊಂದಿದೆ. ರಾಜ್ಯ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ನಾವು ಗ್ಯಾರೆಂಟಿಗಳನ್ನು ಜಾರಿ ಮಾಡಿದ್ದದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದರು.

ಇದೇ ಆಗಸ್ಟ್‌ 27 ರಂದು ಗೃಹಲಕ್ಷ್ಮೀ ಯೋಜನೆಯನ್ನು ಅಧಿಕೃತವಾಗಿ ಜಾರಿ ಮಾಡುತ್ತಿದ್ದೇವೆ, ಅಂದು ಫಲಾನುಭವಿ ಮಹಿಳೆಯರ ಖಾತೆಗಳಿಗೆ ಹಣ ಜಮೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಾವು ಅಧಿಕಾರಕ್ಕೆ ಬಂದ ಮೇಲೆ ಜನರ ಹಿತದೃಷ್ಟಿಯಿಂದ ಹಲವು ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಸರ್ಕಾರಿ ಶಾಲೆ ಮಕ್ಕಳಿಗೆ ವಾರಕ್ಕೆ ಒಂದು ಮೊಟ್ಟೆ ವಿತರಿಸಲಾಗುತ್ತಿತ್ತು. ಆದ್ರೆ ಈಗ ವಾರಕ್ಕೆ ಎರಡು ಮೊಟ್ಟೆ ನೀಡುತ್ತಿದ್ದೇವೆ ಎಂದು ಸಿಎಂ ಹೇಳಿದರು.

ಬಡ ಕಿಡ್ನಿ ರೋಗಿಗಳಿಗೆ ಡಯಾಲಿಸಿಸ್‌ ಉಚಿತವಾಗಿ ಮಾಡಲಾಗುತ್ತದೆ. ನಗರ ಪ್ರದೇಶದ ಬಡವರು, ಶ್ರಮಿಕರು ಹಸಿದು ಜೀವನ ಮಾಡಬಾರದು ಎಂಬ ಉದ್ದೇಶದಿಂದ ಕಡಿಮೆ ಬೆಲೆಗೆ ಆಹಾರ ನೀಡಲಾಗುತ್ತಿದೆ. ಅದಕ್ಕಾಗಿಯೇ ಇಂದಿರಾ ಕ್ಯಾಂಟೀನ್‌ ತೆರೆಯಲಾಗಿದೆ. ಇದಕ್ಕಾಗಿ ಈ ಬಜೆಟ್‌ನಲ್ಲಿ ನೂರು ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು ನಮ್ಮ ಮೆಟ್ರೋ ಬೆಂಗಳೂರಿನಲ್ಲಿ 69 ಕಿಲೋ ಮೀಟರ್‌ ಕಾರ್ಯಾಚರಣೆ ಮಾಡುತ್ತಿದೆ. ಮೆಟ್ರೋದಲ್ಲಿ ಪ್ರತಿದಿನ 6.1 ಲಕ್ಷ ಜನರು ಪ್ರಯಾಣಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮೆಟ್ರೋ ಕಾಮಗಾರಿ ವಿಸ್ತರಣೆಯಾಗಲಿದೆ ಎಂದು ಸಿಎಂ ಹೇಳಿದರು.

Share Post