ರಾಮ ಮಂದಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ; ಸಿಎಂ ಸಿದ್ದರಾಮಯ್ಯ
ಬೆಂಗಳೂರು; ನಮ್ಮ ಸರ್ಕಾರ ಹಾಗೂ ನಮ್ಮ ಕಾಂಗ್ರೆಸ್ ಪಕ್ಷ ರಾಮಮಂದಿರದ ಪರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ರಾಮಮಂದಿರ ವಿಚಾರಕ್ಕೆ ಯಾವತ್ತೂ ನಮ್ಮ ವಿರೋಧವಿಲ್ಲ. ನಾವು ಮಂದಿರದ ಪರವಾಗಿಯೇ ಇದ್ದೇವೆ. ಆದ್ರೆ ರಾಮಮಂದಿರ ಉದ್ಘಾಟನೆಯನ್ನು ಬಿಜೆಪಿ ಪಕ್ಷ ತನ್ನ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಪುಲ್ವಾಮಾ ಭಯೋತ್ಪಾದಕ ದಾಳಿ ಸಂದರ್ಭ ನೆನಪಿಸಿಕೊಂಡಿದ್ದ ಕರ್ನಾಟಕ ಸಚಿವ ಸುಧಾಕರ್, ಕಳೆದ ಲೋಕಸಭೆ ಚುನಾವಣೆಯಲ್ಲಿ ಮತ ಗಳಿಸಲು ಬಿಜೆಪಿ ಸರ್ಕಾರ ಪುಲ್ವಾಮಾ ಭಯೋತ್ಪಾದನಾ ದಾಳಿಯನ್ನು ಬಳಸಿಕೊಂಡಿತ್ತು. ಇದೀಗ ಭಗವಾನ್ ರಾಮನ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಪ್ರಿಯಾಂಕ್ ಕೂಡಾ ಇದೇ ರೀತಿಯ ಮಾತನ್ನಾಡಿದ್ದರು. ಇದರ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿರುವ ಸಿಎಂ ಸಿದ್ದರಾಮಯ್ಯ, ನಾವು ರಾಮಮಂದಿರದ ಪರವಾಗಿದ್ದೇವೆ ಎಂದು ಹೇಳಿದ್ದಾರೆ.