ಗ್ಯಾರೆಂಟಿಗಳಿಂದ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಯ್ತು; ಯಡಿಯೂರಪ್ಪ
ಬೆಂಗಳೂರು; ಚುಣಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಉಚಿತ ಗ್ಯಾರೆಂಟಿಗಳ ಭರವಸೆ ನೀಡಿದ್ದರಿಂದ ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾಯಿತು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ನವರು ಈಗ ಘೋಷಣೆ ಮಾಡಿರುವ ಯೋಜನೆಗಳನ್ನು ಜಾರಿ ಮಾಡಲೇಬೇಕು. ಇಲ್ಲದಿದ್ದರೆ ಅಧಿಕಾರ ತೊರೆದು ಮನೆ ಕಡೆ ನಡೆಯಲಿ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಈಗಾಗಲೇ ಐದು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಕಾಂಗ್ರೆಸ್ ಹತ್ತು ಕೆಜಿ ಉಚಿತವಾಗಿ ನೀಡುತ್ತೇವೆ ಎಂದು ಹೇಳಿದೆ. ಹೀಗಾಗಿ ಎರಡೂ ಸೇರಿ ಹದಿನೈದು ಕೆಜಿ ಅಕ್ಕಿ ನೀಡಬೇಕು. ಅದು ಬಿಟ್ಟು ಕಾಂಗ್ರೆಸ್ನವರು ಮೋದಿ ಕಡೆ ಬೆಟ್ಟು ತೋರಿಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.