ಶಾಲಾ ಪಠ್ಯದಲ್ಲಿ ಈ ಬಾರಿ ಭಗವದ್ಗೀತೆ ಸೇರಿಸುವುದಿಲ್ಲ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ
ಬೆಂಗಳೂರು: ಶಾಲಾ ಪಠ್ಯದಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಭಗವದ್ಗೀತೆ ಸೇರಿಸುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಪರಿಚಯಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ. ಆದ್ರೆ ಈ ಶೈಕ್ಷಣಿಕ ವರ್ಷದಲ್ಲಿ ಭಗವದ್ಗೀತೆಯನ್ನು ಪಠ್ಯದಲ್ಲಿ ಸೇರಿಸುವುದಿಲ್ಲ ಎಂದು ಸಚಿವ ನಾಗೇಶ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಪುಸ್ತಕದಲ್ಲಿ ಜ್ಞಾನವಿದೆ, ಸಂಸ್ಕಾರವಿಲ್ಲ ಎನ್ನುತ್ತಿದ್ದಾರೆ. ಮಾರಲ್ ಸೈನ್ಸ್ ತರುವಂತೆ ಹಲವರು ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಪಠ್ಯದಲ್ಲಿ ಭಗವದ್ಗೀತೆ ಸೇರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಗುಜರಾತ್ ಮಾದರಿ ಎಂಬುದು ನನಗೆ ಗೊತ್ತಿಲ್ಲ. ವಿದ್ಯಾರ್ಥಿಗಳಿಗೆ ಜ್ಞಾನದ ಜತೆ ಸಂಸ್ಕಾರ ಕಲಿಸಬೇಕಿದೆ. ಅದರ ಬಗ್ಗೆ ಈಗ ಚರ್ಚೆ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.