Bengaluru

ಸದ್ಯಕ್ಕೆ ವೀಕೆಂಡ್ ಕರ್ಫ್ಯೂ ವಾಪಾಸ್ ತೆಗೆಯಲ್ಲ- ಸಿಎಂ

ಬೆಂಗಳೂರು: ಕೊರೊನಾ ದಿನೇ ದಿನೇ ಹೆಚ್ಚಳವಾಗುತ್ತಿದೆ. ಹೀಗಾಗಿ ಸರ್ಕಾರದಿಂದ ಟಫ್ ರೂಲ್ಸ್ ಜಾರಿ ಮಾಡಲಾಗಿದೆ. ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂ ಕೂಡ ಜಾರಿ ಮಾಡಲಾಗಿದೆ. ಇಂದು ಸಚಿವ ಸಂಪುಟ ಸಭೆ ನಡೆದಿದೆ. ಈ ಸಭೆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಸದ್ಯಕ್ಕೆ ವೀಕೆಂಡ್ ಕರ್ಫ್ಯೂ ವಾಪಾಸ್ ತೆಗೆಯುವ ಮಾತೇ ಇಲ್ಲ ಎಂದಿದ್ದಾರೆ. ವೀಕೆಂಡ್ ಕರ್ಫ್ಯೂ ನಿಂದಾಗಿ ವಾಣಿಜ್ಯ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗಿಲ್ಲ. ಮುಂದಿನ ವಾರ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುತ್ತೆದೆ ಎಂದರು.
ಸರ್ಕಾರದ ತೀರ್ಮನದ ಬಗ್ಗೆ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟೇ ಅಲ್ಲ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಪಾದಯಾತ್ರೆ ತಡೆಯೋದಕ್ಕೆ ನಿಯಮ ತಂದಿದ್ದಾರೆ ಎಂದಿದ್ದಾರೆ. ಇದನ್ನ ಅವರು ಹಾಗೇ ತಿಳಿದುಕೊಂಡರೆ ಏನು ಮಾಡೋದು. ಆದರೆ ಜನರ ಆರೋಗ್ಯ ದೃಷ್ಟಿಯಿಂದ ತಂದಿರುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Share Post