ರಾಜ್ಯ ಬಜೆಟ್ನಲ್ಲಿ ಬೆಂಗಳೂರಿಗೆ ಬೊಮ್ಮಾಯಿ ಸರ್ಕಾರ ಕೊಟ್ಟಿದ್ದೇನು..?
ಬೆಂಗಳೂರು; ೨೦೨೩-೨೪ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಬೆಂಗಳೂರು ನಗರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಹತ್ತು ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ. ಜೊತೆಗೆ ಟ್ರಾಫಿಕ್ ನಿರ್ವಹಣೆಗೂ ಹಲವು ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರು ಅಭಿವೃದ್ಧಿಗೆ ಹತ್ತು ಸಾವಿರ ಕೋಟಿ ರೂಪಾಯಿ
ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ ‘She Toilet’ ಗಳ ನಿರ್ಮಾಣ
ಶೌಚಾಲಯಗಳು, ಫೀಡಿಂಗ್ ರೂಂಗಳು, ಮೊಬೈಲ್ ಚಾರ್ಜಿಂಗ್, ತುರ್ತು SOS ಸೌಲಭ್ಯಗಳು ಇತ್ಯಾದಿ
ಬೆಂಗಳೂರಿನಲ್ಲಿ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ದೊರಕಿಸುವುದು ಸರ್ಕಾರದ ಆದ್ಯತೆ
243 ವಾರ್ಡ್ಗಳಲ್ಲಿ ನಮ್ಮ ಕ್ಲಿನಿಕ್ ಮತ್ತು 27 ಸ್ಮಾರ್ಟ್ ವರ್ಚುಯಲ್ ಕ್ಲಿನಿಕ್ Virtual Clinic ಗಳನ್ನು ಅನುಮೋದಿಸಲಾಗಿದೆ.
ಹೆಚ್ಚುವರಿಯಾಗಿ 50 ಡಯಾಲಿಸಿಸ್ ಹಾಸಿಗೆಗಳು ಮತ್ತು 300 ಹಾಸಿಗೆಗಳ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸೌಲಭ್ಯ
ಮಹಾನಗರದ ಆರೋಗ್ಯ ಆಡಳಿತ ವ್ಯವಸ್ಥೆಯನ್ನು ಬೆಂಗಳೂರು ಹೆಲ್ತ್ ಸಿಸ್ಟಮ್ಸ್ ಎಂದು ಪುನರ್ ರಚನೆ ಮಾಡಲು ಉದ್ದೇಶಿಸಲಾಗಿದೆ
ಬೆಂಗಳೂರು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಕ್ರಮ
ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ
Artificial Intelligence ನ ಬಳಕೆಯೊಂದಿಗೆ ಟ್ರಾಫಿಕ್ ಸಿಗ್ನಲ್ಗಳ ನಿರ್ವಹಣೆ
ವಿಶ್ವದಲ್ಲಿಯೇ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿರುವ ನಗರ ಬೆಂಗಳೂರು
ಬೆಂಗಳೂರು ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿಯ ಮೂಲಕ ಪ್ರವಾಹ ತಡೆಗಟ್ಟುವುದು
ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ರೂಪಿಸುವುದರೊಂದಿಗೆ ಜನರ ಬದುಕಿನ ಗುಣಮಟ್ಟ ಹೆಚ್ಚಿಸಲು ಕ್ರಮ
ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6,000 ಕೋಟಿ ವೆಚ್ಚದ ಕಾಮಗಾರಿಗಳನ್ನು ಅನುಷ್ಠಾನ
ಹೈ ಡೆನ್ಸಿಟಿ ಯೋಜನೆಯಡಿಯಲ್ಲಿ ಒಟ್ಟು 108 ಕಿ.ಮೀ. ರಸ್ತೆಗಳನ್ನು 273 ಕೋಟಿ ರೂ. ಗಳ ಅಂದಾಜಿನಲ್ಲಿ ತೆಗೆದುಕೊಳ್ಳಲಾಗಿದೆ
195 ಕಿ.ಮೀ. ಉದ್ದದ ಚರಂಡಿ ಮತ್ತು ಕಲ್ವರ್ಟ್ಗಳ ಅಭಿವೃದ್ಧಿಗಾಗಿ 1,813 ಕೋಟಿ ರೂ. ಗಳನ್ನು ಒದಗಿಸಲಾಗಿದೆ