BengaluruEconomy

ಗ್ರಾಮೀಣಾಭಿವೃದ್ಧಿಗೆ ರಾಜ್ಯ ಬಜೆಟ್‌ನಲ್ಲಿ ಕೊಟ್ಟದ್ದೇನು..?

– ಗ್ರಾಮೀಣ ಭಾಗದ ರಸ್ತೆಗಳ ಮತ್ತು ಕೃಷಿ ಭೂಮಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿ
– ನರೇಗಾ ಜೊತೆಗೆ ಸಂಯೋಜಿಸಿ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ 25 ಕಿ.ಮೀ. ನಂತೆ ಒಟ್ಟಾರೆಯಾಗಿ 5,000 ಕಿ.ಮೀ. ರಸ್ತೆಯನ್ನು ಅಭಿವೃದ್ಧಿ
– 300 ಕೋಟಿ ವೆಚ್ಚದಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಕ್ರಮ
– ರಾಜ್ಯದ 20 ಸಾವಿರ ಗ್ರಾಮಗಳಲ್ಲಿ ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ನಿರ್ವಹಿಸುವ ಕಾಮಗಾರಿಗಳು ಜಾರಿ
– ಗ್ರಾಮೀಣ ಪ್ರದೇಶಗಳ ಸ್ವಚ್ಛತೆಯನ್ನು ಕಾಪಾಡಲು ಅಗತ್ಯ ಚರಂಡಿ ವ್ಯವಸ್ಥೆಯನ್ನು ನರೇಗಾ ಹಾಗೂ ಸ್ವಚ್ಛ ಭಾರತ್‌ ಯೋಜನೆಗಳಡಿಯಲ್ಲಿ 4,190 ಕೋಟಿ ವೆಚ್ಚ
– ಪ್ರತಿ ವರ್ಷ 2,000 ಕೆರೆಗಳನ್ನು 200 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಮೂಲಕ ಪಂಚಾಯತ್ ಕರೆಗಳ ಪುನರುಜ್ಜಿವನಕ್ಕೆ ಕ್ರಮ
– ಮೂರು ವರ್ಷಗಳಲ್ಲಿ 5,213 ಗ್ರಾಮ ಪಂಚಾಯಿತಿಗಳಲ್ಲಿ ಕಸ ವಿಲೇವಾರಿ ಘಟಕಗಳನ್ನು ಸ್ಥಾಪಿಸಲಾಗಿದೆ
– ಉಳಿದ ಗ್ರಾಮ ಪಂಚಾಯಿತಿಗಳಲ್ಲಿ ಡಿಸೆಂಬರ್ 2023ರ ಒಳಗಾಗಿ ಕಸ ವಿಲೇವಾರಿ ಘಟಕಗಳನ್ನು ಸ್ಥಾಪಿಸಲಾಗುವುದು
– ಗ್ರಂಥಾಲಯಗಳಿಲ್ಲದ 300 ಗ್ರಾಮಪಂಚಾಯಿತಿಗಳಲ್ಲಿ ಗ್ರಂಥಾಲಯ ಸ್ಥಾಪನೆ

Share Post