BengaluruPolitics

ಕಾಂಗ್ರೆಸ್‌ಗೆ ಮರಳುತ್ತಾರಾ ಶಾಸಕ ಎಸ್‌.ಟಿ.ಸೋಮಶೇಖರ್‌..?; ಆಪರೇಷನ್‌ ಹಸ್ತದ ಲಿಸ್ಟ್‌ನಲ್ಲಿ ಇನ್ನೂ ಯಾರಿದ್ದಾರೆ..?

ಬೆಂಗಳೂರು; ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಪರೇಷನ್‌ ಹಸ್ತ ನಡೆಯುತ್ತಿದೆ ಎಂದು ಕೆಲ ದಿನಗಳಿಂದ ಸುದ್ದಿ ಹಬ್ಬಿತ್ತು. ಅದು ಈಗ ನಿಜವಾಗುವುದು ಬಹುತೇಕ ಪಕ್ಕಾ ಆಗಿದೆ. ಯಶವಂತಪುರ ಶಾಸಕ ಎಸ್‌.ಟಿ.ಸೋಮಶೇಖರ್‌ ಕಾಂಗ್ರೆಸ್‌ ಸೇರೋದು ಪಕ್ಕಾ ಆಗಿದೆ ಎಂದೇ ಹೇಳಲಾಗುತ್ತಿದೆ. 

ಇದಕ್ಕೆ ಪೂರಕ ಎಂಬಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಎಸ್‌.ಟಿ.ಸೋಮಶೇಖರ್‌ ಅವರು ಕಾಂಗ್ರೆಸ್‌ಗೆ ಬರುತ್ತಿದ್ದಾರೆ ಎಂದೇ ಖಚಿತವಾಗಿ ಹೇಳಿದ್ದಾರೆ. ಈ ನಡುವೆ ಸೋಮಶೇಖರ್‌ ಅವರು ಕೂಡಾ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಡಿ.ಕೆ.ಶಿವಕುಮಾರ್‌ ಅವರು ನನ್ನ ರಾಜಕೀಯ ಗುರು ಎಂದೆಲ್ಲಾ ಹೇಳಿದ್ದರು. ಈ ಬೆನ್ನಲ್ಲೇ ಎಸ್‌.ಟಿ.ಸೋಮಶೇಖರ್‌ ಅವರು ತಮ್ಮ ಬೆಂಬಲಿಗರ ಸಭೆ ಕೂಡಾ ನಡೆಸಿದ್ದಾರೆ. ಈ ಸಭೆಯಲ್ಲಿ ನೆಲಮಂಗಲ ಕಾಂಗ್ರೆಸ್‌ ಶಾಸಕ ಎನ್‌.ಶ್ರೀನಿವಾಸ್‌ ಕೂಡಾ ಪಾಲ್ಗೊಂಡಿದ್ದದ್ದು ಅಚ್ಚರಿಗೆ ಕಾರಣವಾಗಿದೆ.

ಇನ್ನೊಂದೆಡೆ ಬಿಜೆಪಿ ನಾಯಕರು ಸೋಮಶೇಖರ್‌ ಅವರ ಮನವೊಲಿಸಲು ಯತ್ನಿಸುತ್ತಿದ್ದಾರೆ. ಬೊಮ್ಮಾಯಿ, ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಹಲವರು ಶಾಸಕ ಸೋಮಶೇಖರ್‌ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರು ನನಗೆ ರಾಜ್ಯ ನಾಯಕರ ಜೊತೆ ಯಾವುದೇ ಸಮಸ್ಯೆ ಇಲ್ಲ. ಆದ್ರೆ ಚುನಾವಣೆ ಸಮಯದಲ್ಲಿ ಸ್ಥಳೀಯ ಬಿಜೆಪಿ ಮುಖಂಡರೇ ನನ್ನ ವಿರುದ್ಧ ಕೆಲಸ ಮಾಡಿದರು. ಅವರ ವಿರುದ್ಧ ಇನ್ನೂ ಕ್ರಮ ಕೈಗೊಂಡಿಲ್ಲ. ಇದೇ ನನಗೆ ಬೇಸರ ಎಂದಿದ್ದಾರೆ ಎನ್ನಲಾಗಿದೆ.

ಎಸ್‌.ಟಿ.ಸೋಮಶೇಖರ್‌ ಅಲ್ಲದೆ ಬೆಂಗಳೂರಿನ ಐದಕ್ಕೂ ಹೆಚ್ಚು ಬಿಜೆಪಿ ಶಾಸಕರು, ಮಾಜಿ ಶಾಸಕರು ಕಾಂಗ್ರೆಸ್‌ಗೆ ಸೆಳೆಯೋ ಪ್ರಯತ್ನ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.

Share Post