ನಟರಾಜಗೌಡರಿಗೆ ಸಿಗುತ್ತಾ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ..?
ಬೆಂಗಳೂರು; ನಿಗಮ-ಮಂಡಳಿಗೆ ಅಧ್ಯಕ್ಷ ಉಪಾಧ್ಯಕ್ಷರ ನೇಮಕದ ವಿಚಾರ ಈಗ ಹೆಚ್ಚು ಚರ್ಚೆಯಲ್ಲಿದೆ. ಈಗಾಗಲೇ ಪಟ್ಟಿ ರೆಡಿಯಾಗಿದ್ದು, ಬಿಡುಗಡೆ ಒಂದೇ ಬಾಕಿ ಎಂದು ಹೇಳಲಾಗುತ್ತಿದೆ. ಹೀಗಾಗಿ ಯಾರ್ಯಾರಿಗೆ ಸ್ಥಾನ ಸಿಕ್ಕಿದೆ ಎಂಬ ಕುತೂಹಲ ಇದ್ದೇ ಇದೆ. ಈ ನಡುವೆ, ಕಾಂಗ್ರೆಸ್ ಪಕ್ಷದಲ್ಲಿ ಕಳೆದ ಮೂವತ್ತು ವರ್ಷಗಳಿಂದ ದುಡಿಯುತ್ತಿರುವ ಎ.ಎನ್.ನಟರಾಜಗೌಡರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಸಿಗುವುದು ಪಕ್ಕಾ ಎಂದು ಹೇಳಲಾಗುತ್ತಿದೆ. ಅವರ ಪರವಾಗಿ ಹಲವಾರು ಸಚಿವರು ಹಾಗೂ ಕಾಂಗ್ರೆಸ್ ನಾಯಕರು ಸಿಎಂಗೆ ಶಿಫಾರಸು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಟರಾಜ ಗೌಡರಿಗೆ ಈ ಬಾರಿ ನಿಗಮ-ಮಂಡಳಿಯಲ್ಲಿ ಸ್ಥಾನ ಸಿಗುವುದು ಖಚಿತ ಎಂದು ಹೇಳಲಾಗುತ್ತಿದೆ.
ನಟರಾಜಗೌಡರು ಕಳೆದ ಮೂವತ್ತು ವರ್ಷಗಳಿಂದ ಮಾಧ್ಯಮ ಸಂಯೋಜಕರಾಗಿ, ಕಾಂಗ್ರೆಸ್ ಪಕ್ಷದ ವಕ್ತಾರರಾಗಿ, ಪ್ರಚಾರ ಸಮಿತಿ, ಕೆಪಿಸಿಸಿಯಲ್ಲಿ ಹಲವು ಜವಾಬ್ದಾರಿಗಳನ್ನು ಹೊತ್ತು ಕೆಲಸ ಮಾಡಿದ್ದಾರೆ. ಟಿವಿ ಡಿಬೇಟ್‌ಗಳಲ್ಲಿ ಪಾಲ್ಗೊಂಡು ಕಾಂಗ್ರೆಸ್ ಪಕ್ಷದ ಪರವಾಗಿ ಮಾತನಾಡಿದ್ದಾರೆ. ಹೀಗಾಗಿ ಅವರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನ ಕೊಡಬೇಕೆಂದು ಸಚಿವರಾದ ಹೆಚ್.ಸಿ.ಮಹಾದೇವಪ್ಪ, ದಿನೇಶ್ ಗುಂಡೂರಾವ್, ಎಚ್.ಕೆ.ಪಾಟೀಲ್, ಕೆ.ಜೆ.ಜಾರ್ಜ್, ಮಾಜಿ ರಾಜ್ಯಸಭಾ ಸದಸ್ಯ ರಾಜೀವ್ ಗೌಡ ಸೇರಿದಂತ ಹಲವು ನಾಯಕರು ನಟರಾಜಗೌಡರ ಪರವಾಗಿ ಶಿಫಾರಸು ಮಾಡಿದ್ದಾರೆ.