BengaluruPolitics

ವೀಕ್ಷಕರ ಆಗಮನ; ಪ್ರತಿಪಕ್ಷ ನಾಯಕನಾಗಿ ಆರ್‌.ಅಶೋಕ್‌ ಆಯ್ಕೆಯಾಗುತ್ತಾರಾ..?

ಬೆಂಗಳೂರು; ಇಂದು ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ. ಹೀಗಾಗಿ ಇಂದು ಸಂಜೆ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಏರ್ಪಡಿಸಲಾಗಿದೆ. ಇದರಲ್ಲಿ ಪಾಲ್ಗೊಳ್ಳಲು ಕೇಂದ್ರದಿಂದ ವೀಕ್ಷಕರು ಆಗಮಿಸಿದ್ದಾರೆ. ರಾಜ್ಯ ಬಿಜೆಪಿ ಕಚೇರಿಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಜೊತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಕೂಡಾ ಆಗಮಿಸಿದ್ದಾರೆ.

ಇನ್ನು ವಿಪಕ್ಷ ನಾಯಕನ ಸ್ಥಾನಕ್ಕೆ ಆರ್‌.ಅಶೋಕ್‌ ಹಾಗೂ ಅಶ್ವತ್ಥ್‌ ನಾರಾಯಣ ಹೆಸರುಗಳು ಮುಂಚೂಣಿಯಲ್ಲಿವೆ. ಇದರಲ್ಲಿ ಆರ್‌.ಅಶೋಕ್‌ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಅಶೋಕ್‌ ಅವರು, ಉಪಮುಖ್ಯಮಂತ್ರಿ ಆಗಿದ್ದರು. ಕಂದಾಯ, ಗೃಹ, ಆರೋಗ್ಯ, ಸಾರಿಗೆ, ಪೌರಾಡಳಿತ ಸೇರಿದಂತೆ ಹಲವು ಖಾತೆಗಳನ್ನು ನಿಭಾಯಿಸಿದ ಅನುಭವ ಅವರಿಗಿದೆ. ಪಕ್ಷದ ವಿವಿಧ ಹುದ್ದೆಗಳಲ್ಲಿ ಕೂಡಾ ಅವರು ಕಾರ್ಯನಿರ್ವಹಿಸಿದ್ದಾರೆ. ಜೊತೆಗೆ ಮೊದಲಿನಿಂದಲೂ ಪಕ್ಷ ನಿಷ್ಠರಾಗಿದ್ದಾರೆ.

ಇನ್ನು ಆರ್‌.ಅಶೋಕ್‌ಗೆ ಪಕ್ಷದಲ್ಲಿ ಯಾರೂ ವಿರೋಧಿಗಳಿಲ್ಲ. ಅವರು ಎಲ್ಲರೊಂದಿಗೂ ಸಮನ್ವಯ ಕಾಯ್ದುಕೊಂಡಿದ್ದಾರೆ. ಜೊತೆಗೆ ಜೆಡಿಎಸ್‌ ಜೊತೆಗೂ ಇವರು ಹೊಂದಿಕೊಳ್ಳುತ್ತಾರೆ. ಹೀಗಾಗಿ ಆರ್‌.ಅಶೋಕ್‌ ಅವರನ್ನೇ ವಿಪಕ್ಷ ನಾಯಕನಾಗಿ ಆಯ್ಕೆ ಮಾಡುತ್ತಾರೆ ಎನ್ನಲಾಗುತ್ತದೆ. ಪರಿಷತ್‌ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ ಪೂಜಾರಿ ಆಯ್ಕೆಯಾಗಬಹುದು ಎಂದು ಅಂದಾಜಿಸಲಾಗಿದೆ.

 

Share Post