ಡಿಕೆಶಿ ವಿರುದ್ಧ ಸಿಬಿಐ ತನಿಖೆ ಹಿಂಪಡೆಯುವ ವಿಚಾರ; ನಾಳೆ ಬಿಜೆಪಿಯಿಂದ ಪ್ರತಿಭಟನೆ
ಬೆಂಗಳೂರು; ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆಯುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ನಾಳೆ ಪ್ರತಿಭಟನೆಗೆ ಕರೆ ನೀಡಲಾಗಿದೆ. ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
ನಾಳೆ ಬೆಳಗ್ಗೆ ಹತ್ತು ಗಂಟೆಗೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿದುಬಂದಿದೆ. ಬಿಜೆಪಿ ನಾಯಕರೆಲ್ಲಾ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.