Bengaluru

ಮಹಿಳಾ ಸಂಘಗಳಿಗೆ ಡಿಜಿಟಲ್‌ ವೇದಿಕೆ; ಒಪ್ಪಂದಕ್ಕೆ ಸಿಎಂ ಸಹಿ

ಬೆಂಗಳೂರು: ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳನ್ನು ಡಿಜಿಟಲ್ ವೇದಿಕೆಯಲ್ಲಿ ಮಾರಾಟ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಒಪ್ಪಂದ ಮಾಡಿಕೊಳ್ಳಲಾಯಿತು.

ಇದಕ್ಕಾಗಿ  ಸಂಜೀವಿನಿ-ಕೆ ಎಸ್ ಆರ್ ಎಲ್ ಪಿ ಎಸ್ ಹಾಗೂ ಅಮೆಜಾನ್ ಸಂಸ್ಥೆಗಳ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಹಿ ಹಾಕಿದ್ದಾರೆ. ಇದ್ರಿಂದಾಗಿ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸುತ್ತಿರುವ ಉತ್ಪನ್ನಗಳಿಗೆ ಮಾರುಕಟ್ಟೆ ಸಿಗಲಿದ್ದು, ಮಹಿಳೆಯರು ಸ್ವಾವಲಂಬಿಗಳಾಗಲು ಸಹಾಯವಾಗಲಿವೆ.

ಉನ್ನತ ಶಿಕ್ಷಣ, ಐಟಿ, ಬಿಟಿ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಖಾತೆ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಅಮೆಜಾನ್ ಕಂಪೆನಿಯ ಉಪಾಧ್ಯಕ್ಷ ಚೇತನ್ ಕೃಷ್ಣಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share Post