Bengaluru

ವರ್ಲ್ಡ್​ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಕೆಂಪೇಗೌಡ ಕಂಚಿನ ಪ್ರತಿಮೆ

ಬೆಂಗಳೂರು; ನಾಳೆ ಪ್ರಧಾನಿ ನರೇಂದ್ರ ಮೋದಿಯವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ -೨ ಹಾಗೂ ವಿಶ್ವದ ಅತಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಈ ಪ್ರತಿಮೆ ಉದ್ಘಾಟನೆಗೂ ಮೊದಲೇ ವರ್ಲ್ಡ್​ ಬುಕ್ ಆಫ್ ರೆಕಾರ್ಡ್ಸ್ ಸೇರಿದೆ.

84 ಕೋಟಿ ರೂಪಾಯಿ ವೆಚ್ಚದಲ್ಲಿ 108 ಅಡಿ ಎತ್ತರದಲ್ಲಿ ಬೃಹತ್ ಕಂಚಿನ ಕೆಂಪೇಗೌಡ ಪ್ರತಿಮೆಯನ್ನು ವಿಮಾನ ನಿಲ್ದಾಣದಲ್ಲಿ ನಿರ್ಮಾಣ ಮಾಡಲಾಗಿದೆ. ಈ ಪ್ರತಿಮೆಯ ಮುಂಭಾಗದಲ್ಲಿ ಮೂರು ಎಕರೆ ಜಾಗದಲ್ಲಿ 20 ಕೋಟಿ ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ. ಈ ಮೂಲಕ ಕೆಂಪೇಗೌಡರ ಜೀವನ ಚರಿತ್ರೆ ಹಾಗೂ ಆಡಳಿತದ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಪ್ರಯತ್ನ ಮಾಡಲಾಗುತ್ತಿದೆ.

ಕೆಂಪೇಗೌಡರ ಕೈಯಲ್ಲಿರುವ ಖಡ್ಗ 4000 ಕೆ.ಜಿ ಇದೆ. ಈ ಪ್ರತಿಮೆಗೆ 120 ಟನ್ ಉಕ್ಕು​, 98 ಟನ್ ಕಂಚು ಬಳಸಲಾಗಿದೆ.

Share Post