ಎರಡು ಮೂರು ದಿನದಲ್ಲಿ ಸಂಪುಟ ವಿಸ್ತರಣೆ; ಯಡಿಯೂರಪ್ಪ
ಬೆಂಗಳೂರು: ಎರಡು ಮೂರು ದಿನದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಿಶ್ಚಿತ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ತೆಗೆದುಕೊಂಡೇ ಅಮಿತ್ ಷಾ ಅವರು ಬೆಂಗಳೂರಿಗೆ ಬಂದಿದ್ದಾರೆ. ಒಂದು ವೇಳೆ ಸಾಧ್ಯವಾಗದಿದ್ದರೆ ದೆಹಲಿಗೆ ವಾಪಸ್ ಹೋಗಿ ನಿರ್ಧಾರ ಪ್ರಕಟಿಸುತ್ತಾರೆ. ಒಟ್ಟಿನಲ್ಲಿ ಆದಷ್ಟು ಸಂಪುಟ ವಿಸ್ತರಣೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.
ಯಡಿಯೂರಪ್ಪ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡೇರಿಯ ಮಠದ ಸಮಾರಂಭಕ್ಕೆ ಹೋಗಿದ್ದರು. ಬಸವ ಜಯಂತಿ ಕಾರ್ಯಕ್ರಮ ಹಾಗೂ ಅಡಿಗಲ್ಲು ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ವಿಜಯೇಂದ್ರ ಕೂಡಾ ಇದ್ದರು. ಕಾರ್ಯಕ್ರಮ ಮುಗಿಸಿ ಬರುವಾಗ ಮಾತನಾಡಿದ ಯಡಿಯೂರಪ್ಪ ಅವರು, ಸಂಪುಟ ವಿಸ್ತರಣೆಯಾಗುತ್ತದೆ, ಆದ್ರೆ ಮುಖ್ಯಮಂತ್ರಿ ಬದಲಾವಣೆ ಊಹಾಪೋಹ ಎಂದು ಹೇಳಿದರು.