ರಾಜಕೀಯ ವರಸೆ ಶುರು ಮಾಡಿದ ಯತ್ನಾಳ್ ಹಾಗೂ ಬೆಲ್ಲದ್
ಬೆಂಗಳೂರು; ಇಂಧು ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ. ಈ ನಡುವೆ, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ ಬೆಲ್ಲದ್ ತಮ್ಮ ರಾಜಕೀಯ ವರಸೆ ಶುರು ಮಾಡಿದಾರೆ.
ಯಡಿಯೂರಪ್ಪರ ವಿರೋಧ ಬಣದಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ್ ಬೆಲ್ಲದ್ ತಮ್ಮ ರಾಜಕೀಯ ಆಟ ಶುರು ಮಾಡಿದ್ದಾರೆ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಮೇಲೆ ಇಬ್ಬರೂ ಸೈಲೆಂಟ್ ಆಗಿದ್ದರು. ಇದೀಗ ವೀಕ್ಷಕರು ಬೆಂಗಳೂರಿಗೆ ಬರುತ್ತಿದ್ದಂತೆ ಆಕ್ಟಿವ್ ಆಗಿದ್ದಾರೆ. ಮೊದಲಿಗೆ ಇಬ್ಬರೂ ನಾಯಕರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅನಂತರ ಕೇಂದ್ರದಿಂದ ವೀಕ್ಷಕರಾಗಿ ಬಂದಿರುವ ನಿರ್ಮಲಾ ಸೀತರಾಮನ್ ಹಾಗೂ ದುಷ್ಯಂತ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಸಹ ವಿಪಕ್ಷ ನಾಯಕ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದು, ತಮ್ಮ ಬೇಡಿಕೆಯನ್ನು ವೀಕ್ಷಕರ ಮುಂದೆ ಇಟ್ಟಿದ್ದಾರೆ ಎನ್ನಲಾಗಿದೆ. ಯತ್ನಾಳ್ ವಿಪಕ್ಷ ನಾಯಕನ ಸ್ಥಾನ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದ್ರೆ ರಾಜ್ಯಾಧ್ಯಕ್ಷ ಸ್ಥಾನ ವಿಜಯೇಂದ್ರಗೆ ದಕ್ಕಿದೆ. ಹೀಗಾಗಿ ವಿಪಕ್ಷ ನಾಯಕನ ಸ್ಥಾನಕ್ಕಾಗಿ ಲಾಬಿ ಶುರು ಮಾಡಿದ್ದಾರೆ.
ವೀಕ್ಷಕರ ಭೇಟಿ ಬಳಿಕ ಯತ್ನಾಳ್ ಮಾತನಾಡಿದ್ದ, ವಿಧಾನಸಭಾ ಚುನಾವಣೆ ವೇಳೆ ಆಗಿರುವ ಬೆಳವಣಿಗೆ ಬಗ್ಗೆ ವಿವರ ಕೊಟ್ಟಿದ್ದೇನೆ. ಬೆಂಗಳೂರಿಗೆ ಬಂದಿರುವ ವೀಕ್ಷಕರಿಗೆ ರಾಜ್ಯದ ಎಷ್ಟೋ ವಿಷಯಗಳು ಗೊತ್ತಿರಲಿಲ್ಲ. ಧೈರ್ಯದಿಂದ ನಾನು ಎಲ್ಲವನ್ನೂ ಹೇಳಿದ್ದೇನೆ ಎಂದು ಹೇಳಿದ್ದಾರೆ