Bengaluru

ಜಿಪಂ, ತಾಪಂ ಮೀಸಲಾತಿ ಗೊಂದಲ; ಚರ್ಚಿಸಿ ತೀರ್ಮಾನಿಸುತ್ತೇನೆ ಎಂದು ಸಿಎಂ

ಬೆಂಗಳೂರು: ತಾಲ್ಲೂಕು ಪಂಚಾಯತ್‌ ಹಾಗೂ ಜಿಲ್ಲಾ ಪಂಚಾಯತ್‌ ಚುನಾವಣೆಗಳಲ್ಲಿ ಎಸ್‌ಸಿ ಹಾಗೂ ಎಸ್‌ಟಿಯವರಿಗೆ ಮಾತ್ರ ಮೀಸಲಾತಿ ನೀಡಬೇಕೆಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವ ರೀತಿಯಲ್ಲಿ ಚುನಾವಣೆ ನಡೆಸಬೇಕು ಎಂಬುದರ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೀಸಲಾತಿ ಹೇಗೆ ನೀಡಬೇಕು. ಒಬಿಸಿಯವರಿಗೆ ಚುನಾವಣೆಯಲ್ಲಿ ಮೀಸಲಾತಿ ಒದಗಿಸಿ ಹೇಗೆ ಚುನಾವಣೆ ನಡೆಸಬೇಕು ಎಂಬುದರ ಬಗ್ಗೆ ಚರ್ಚಿಸಲಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸಿದ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು ಹಿಜಾಬ್‌ ವಿವಾದದ ಬಗ್ಗೆ ಮಾತನಾಡಿದ ಅವರು, ಸೋಮವಾರ ಕೋರ್ಟ್‌ ಏನು ಹೇಳುತ್ತೋ ಕಾಯೋಣ ಎಂದು ಹೇಳಿದ್ದಾರೆ. ನಾನು ನನ್ನ ಸ್ವಕ್ಷೇತ್ರಕ್ಕೆ ಹೋಗುತ್ತಿದ್ದೇನೆ. ಅಲ್ಲಿ ಒಂದಷ್ಟು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಿದ್ದೇನೆ. ಜೊತೆಗೆ ನನ್ನ ಆತ್ಮೀಯರ ಜೊತೆ ಕೆಲಕಾಲ ಕಳೆಯಲಿದ್ದೇನೆ ಎಂದೂ ಸಿಎಂ ಇದೇ ವೇಳೆ ಹೇಳಿದರು.

Share Post