ಅತ್ತಿಬೆಲೆ ಪಟಾಕಿ ದುರಂತ; ಮೃತರ ಸಂಖ್ಯೆ 11ಕ್ಕೇರಿಕೆ
ಆನೇಕಲ್: ತಾಲೂಕಿನಅತ್ತಿಬೆಲೆ ಗಡಿಭಾಗದದ ಪಟಾಕಿ ಅಂಗಡಿಯಲ್ಲಿ ನಡೆದ ಅಗ್ನಿ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ಶನಿವಾರ ಮಧ್ಯಾಹ್ನ ಪಟಾಕಿ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದರಿಂದ ಮೂವರು ಗಂಭೀರವಾಗಿ ಗಾಯಗೊಂಡು, 11 ಮಂದಿ ನಾಪತ್ತೆಯಾಗಿದ್ದರು.
ಆದರೆ, ನಾಪತ್ತೆಯಾಗಿದ್ದ 11 ಕಾರ್ಮಿಕರು ಸಜೀವ ದಹನವಾಗಿದ್ದು, ಮೃತದೇಹಗಳನ್ನು ಹೊರಗೆ ತೆಗೆಯಲಾಗುತ್ತಿದೆ.
ದೀಪಾವಳಿ ಹಬ್ಬಕ್ಕಾಗಿ ಮಳಿಗೆಯಲ್ಲಿ ಹೆಚ್ಚು ಪಟಾಕಿಗಳನ್ನು ಶೇಖರಣೆ ಮಾಡಲಾಗಿತ್ತು. ಆದರೆ, ಏಕಾಏಕಿ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ದುರಂತ ಸಂಭವಿಸಿದೆ. ಮಳಿಗೆಯಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ನವೀನ್ ಎಂಬುವವರ ಪಟಾಕಿ ಮಳಿಗೆ ಇದಾಗಿದ್ದು, ಪಟಾಕಿ ಬಾಕ್ಸ್ಗಳನ್ನು ತಂದು ಲಾರಿಯಿಂದ ಅನ್ಲೋಡ್ ಮಾಡುವಾಗ ಈ ಅವಘಡ ಸಂಭವಿಸಿದೆ.