Bengaluru

ಕೆಳದಿ, ಸುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು:  ಕೆಳದಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಪಡಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕೆಳದಿ ರಾಣಿ ಚೆನ್ನಮ್ಮನ ಪಟ್ಟಾಭಿಷೇಕದ 350 ನೇ ವರ್ಷಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡುತ್ತಿದ್ದರು. ಕೆಳದಿ ಚನ್ನಮ್ಮನ ಪಟ್ಟಾಭಿಷೇಕದ ದಿನದಂದು ಆಚರಣೆ ಮಾಡುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಮುಂದಿನ ವರ್ಷ ಕೆಳದಿ ಯಲ್ಲಿಯೇ ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದರು.

ಕೆಳದಿ ಚನ್ನಮ್ಮ ಒಬ್ಬ ಧೀರ ಮಹಿಳೆ. ಇಂತಹ ವೀರ ಮಹಿಳೆಯರನ್ನು ಗುರುತಿಸುವ ಮೂಲಕ ಕರ್ನಾಟಕದ ಭವ್ಯ ಪರಂಪರೆಯ ಜೊತೆಗೆ ಭವಿಷ್ಯ ವನ್ನು ನಿರ್ಮಾಣ ಮಾಡಬಹುದು ಎಂದರು.

Share Post