ದಾರಿಯಲ್ಲಿ ಬಿದ್ದಿದ್ದ ವಿದ್ಯುತ್ ವೈರ್ ತುಳಿದು ತಾಯಿ-ಮಗು ಸಾವು
ಬೆಂಗಳೂರು: ಕಾಡುಗೋಡಿ ಠಾಣೆ ವ್ಯಾಪ್ತಿಯಲ್ಲಿ ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ- ಮಗು ಮೃತಪಟ್ಟಿದ್ದಾರೆ.
ತಾಯಿ ಸೌಂದರ್ಯ ಹಾಗೂ ಮಗಳು ಸುವಿಕ್ಸಾಲಿಯ ಮೃತರು. ತಮಿಳುನಾಡಿನಿಂದ ಬೆಂಗಳೂರಿಗೆ ಭಾನುವಾರ ಬೆಳಿಗ್ಗೆ ಬಂದಿದ್ದ ಇವರಿಬ್ಬರು, ರಸ್ತೆಯಲ್ಲಿ ನಡೆದುಕೊಂಡು ಮನೆಯತ್ತ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ.
ಕಾಡುಗೋಡಿ ಬಸ್ ನಿಲ್ದಾಣದಲ್ಲಿ ಇಳಿದಿದ್ದ ತಾಯಿ-ಮಗಳು, ರಸ್ತೆಯಲ್ಲಿ ಹೊರಟಿದ್ದರು. ಅದೇ ರಸ್ತೆಯಲ್ಲಿ ವಿದ್ಯುತ್ ತಂತಿ ತುಂಡರಿಸಿತ್ತು. ಅದರಲ್ಲಿ ವಿದ್ಯುತ್ ಪ್ರವಹಿಸುತ್ತಿತ್ತು’ ಎಂದು ಸ್ಥಳೀಯರು ಹೇಳಿದರು.
‘ತಾಯಿ-ಮಗಳು ವಿದ್ಯುತ್ ತಂತಿ ತುಳಿದಿದ್ದರು. ವಿದ್ಯುತ್ ಪ್ರವಹಿಸಿ ಅವರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದರು.