Bengaluru

ನಾಮಫಲಕದ ಶೇ.60 ಭಾಗ ಕನ್ನಡದಲ್ಲೇ ಇರಬೇಕು; ಸರ್ಕಾರದಿಂದ ಡೆಡ್ ಲೈನ್

ಬೆಂಗಳೂರು; ಕನ್ನಡದಲ್ಲೇ ನಾಮಫಲಕ ಅಳವಡಿಸಬೇಕೆಂದು ಆಗ್ರಹಿಸಿ ನಿನ್ನೆ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆದಿತ್ತು. ಈ ವೇಳೆ ಕರವೇ ನಾರಾಯಣ ಗೌಡ ಸೇರಿ ಹಲವರನ್ನು ಬಂಧಿಸಲಾಗಿದೆ. ಇದರ ವಿರುದ್ಧ ಇತರೆ ಕನ್ನಡ ಸಂಘಟನೆ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಈ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ.

 

 ಸಿಎಂ ಸಿದ್ದರಾಮಯ್ಯ ಇಂದು ದಿಢೀರ್ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದರು. ಬಳಿಕ ಮಾತನಾಡಿದ ಅವರು, ಶೇ.60ರಷ್ಟು ಕನ್ನಡದಲ್ಲಿಯೇ ಬೋರ್ಡ್​ ಇರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್​ ಚೇಂಜ್​ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು ಎಂದು ಆದೇಶ ಹೊರಡಿಸಿದರು.

 

Share Post