Bengaluru

ಮಳೆಯಿಂದಾಗಿ ಅವಾಂತರ; ಐಟಿಬಿಟಿ ಕಂಪನಿಗಳ ಜೊತೆ ಮಾತುಕತೆಗೆ ಮುಂದಾದ ಸರ್ಕಾರ

ಬೆಂಗಳೂರು; ಭಾರಿ ಮಳೆ ಕಾರಣದಿಂದ ಐಟಿಬಿಟಿ ಕಂಪನಿಗಳು ಎದುರಿಸುತ್ತಿರುವ ಸಂಕಷ್ಟ ಕುರಿತು ರಾಜ್ಯ ಸರ್ಕಾರವನ್ನು ಕಡೆಗೂ ಗಂಭೀರ ಚಿಂತನೆ ನಡೆಸಿದೆ. ಈ ಕುರಿತಾಗಿ ಉದ್ಯಮಿ ಟಿ.ವಿ.ಮೋಹನ್ ದಾಸ್ ಪೈ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಐಟಿ ಕಂಪನಿಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿ ಸಲಹೆ ಪಡೆಯುವ ನಿರ್ಧಾರಕ್ಕೆ ಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಬ್ರಾಂಡ್‌ ಬೆಂಗಳೂರಿಗೆ ಧಕ್ಕೆಯಾಗುತ್ತಿದೆ ಎಂದು ಮೋಹನ್ ದಾಸ್ ಪೈ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅತಿ ಹೆಚ್ಚು ಐಟಿಬಿಟಿ ಕಂಪನಿಗಳು ಇರುವ ಬೆಳ್ಳಂದೂರು, ಮಾರತ್ತಹಳ್ಳಿ, ಔಟರ್ ರಿಂಗ್ ರೋಡ್‌ನಲ್ಲಿ ಮಳೆಯಿಂದಾಗಿ 2 ದಿನವಾದರೂ ನೀರು ತಗ್ಗಿಲ್ಲ. ಐಟಿಬಿಟಿಯಲ್ಲಿ ಕೃತಕ ನದಿಗಳು ಸೃಷ್ಟಿಯಾಗಿವೆ. ರಸ್ತೆಗಳು ಕಿತ್ತುಹೋಗಿದ್ದು, ರಾಜಕಾಲುವೆಯ ಹೂಳೆತ್ತದೇ ಬಿಬಿಎಂಪಿ ನಿರ್ಲಕ್ಷ್ಯವಹಿಸಿದೆ ಎನ್ನುವ ಆರೋಪ ಮಾಡಿದ್ದಾರೆ. ಸದ್ಯದಲ್ಲೇ ಐಟಿಬಿಟಿ ಕಂಪನಿ ಮುಖ್ಯಸ್ಥರ ಜೊತೆ ಸಭೆ ನಡೆಸುತ್ತೇವೆ. ಸಮಸ್ಯೆ ಪರಿಹಾರ ಕುರಿತು ಅವರಿಂದ ಸಲಹೆ ಪಡೆದು, ಅಭಿಪ್ರಾಯ ಸಂಗ್ರಹ ಮಾಡುತ್ತೇವೆ, ಅವರಿಗಾಗುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತದೆ ಎಂದಿದಾರೆ.

Share Post