ವಕೀಲ ಜಗದೀಶ್ಗೆ 14 ದಿನಗಳ ನ್ಯಾಯಾಂಗ ಬಂಧನ
ಬೆಂಗಳೂರು: ಶುಕ್ರವಾರ ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ವಕೀಲ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ನ್ಯಾಯಾಲಯದ ಆವರಣದಲ್ಲಿ ದುರ್ವರ್ತನೆ ತೋರಿರುವುದಾಗಿ ಆರೋಪಿಸಿ ಶನಿವಾರ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗವು ಪೊಲೀಸ್ ಕಮೀಷನರ್ ಕಮಲ್ ಪಂತ್ ಅವರಿಗೆ ದೂರು ನೀಡಿದ್ದರು.
ಈ ಬಗ್ಗೆ ತನಿಖೆ ಮಾಡುವಂತೆ ಕೇಂದ್ರ ವಿಭಾಗದ ಪೊಲೀಸರಿಗೆ ಕಮಲ್ ಪಂತ್ ಸೂಚಿಸಿದ್ದರು. ಭಾನುವಾರ ಬೆಳಗಿನ ಜಾವ ಕೊಡಿಗೇಹಳ್ಳಿಯಲ್ಲಿರುವ ಮನೆಯಲ್ಲಿ ವಕೀಲ ಜಗದೀಶ್ ಅವರನ್ನು ಬಂಧಿಸಿರುವ ಕೇಂದ್ರ ವಿಭಾಗದ ಪೊಲೀಸರು ಕೋರಮಂಗಲ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಒಂದನೇ ಎಸಿಎಂಎಂ ನ್ಯಾಯಾಧೀಶರು ೧೪ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದ್ದಾರೆ.