BengaluruBusiness

IT ಕಂಪನಿಗಳಲ್ಲಿ ದಿನಕ್ಕೆ 14 ಗಂಟೆ ಕೆಲಸ; ಪ್ರಸ್ತಾಪಕ್ಕೆ ಭಾರಿ ಆಕ್ರೋಶ

ಬೆಂಗಳೂರು; ಐಟಿ ಕಂಪನಿಗಳು ಕರ್ನಾಟಕದಲ್ಲಿ ತಮ್ಮ ಉದ್ಯೋಗಿಗಳು ದಿನಕ್ಕೆ 14 ಗಂಟೆ ಕೆಲಸ ಮಾಡಬೇಕೆಂಬ ಪ್ರಸ್ತಾಪ ಇಟ್ಟಿವೆ. ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಪ್ರಸ್ತಾಪ ಸಲ್ಲಿಸಲಾಗಿದ್ದು, ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿದೆ..

   ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.. ಈ ತಿದ್ದುಪಡಿಯಲ್ಲಿ ಕೆಲಸದ ಅವಧಿ ವಿಸ್ತರಣೆ ಮಾಡಬೇಕೆಂಬ ಪ್ರಸ್ತಾಪ ಐಟಿ ಕಂಪನಿಗಳದ್ದು.. ಆದ್ರೆ ಸರ್ಕಾರ ಈ ಬಗ್ಗೆ ಇನ್ನು ಯಾವುದೇ ತೀರ್ಮಾನ ಮಾಡಿಲ್ಲ..

   ಐಟಿ ಕಂಪನಿಗಳ ಪ್ರಸ್ತಾಪ ಸುದ್ದಿ ತಿಳಿಯುತ್ತಿದ್ದಂತೆ ಕಾರ್ಮಿಕ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಹೊಸ ಪ್ರಸ್ತಾವನೆಯಂತೆ ಐಟಿ ಉದ್ಯೋಗಿಗಳು, ಬಿಪಿಓಗಳಲ್ಲಿ 12 ಗಂಟೆಗೂ ಅಧಿಕ ಕೆಲಸ ಮಾಡಲು ಅವಕಾಶ ನೀಡಬೇಕು. ಅಲ್ಲದೇ ನಿಯಮಿತವಾಗಿ ಮೂರು ತಿಂಗಳು 125 ಗಂಟೆ ಮೀರದಂತೆ ಕೆಲಸ ಇರಬೇಕು ಎಂದು ಮನವಿ ಮಾಡಲಾಗಿದೆ. ಈ ಪ್ರಸ್ತಾವನೆ ಕುರಿತು ಸರ್ಕಾರ ಒಂದು ಸುತ್ತಿನ ಮಾತುಕತೆ ನಡೆಸಿದೆ.

Share Post