Central Budget-2024; ಬಜೆಟ್‌ನಲ್ಲಿ ಮಹಿಳೆಯರಿಗೆ 3 ಲಕ್ಷ ಕೋಟಿ ರೂ. ಅನುದಾನ
ನವದೆಹಲಿ; ಮಹಿಳೆಯರು ಹಾಗೂ ಹೆಣ್ಣುಮಕ್ಕಳಿಗಾಗಿ ಬಜೆಟ್‌ನಲ್ಲಿ ವಿಶೇಷ ಅನುದಾನವನ್ನು ನೀಡಲಾಗಿದೆ.. ಮಹಿಳೆಯರ ಏಳ್ಗೆ ಹಾಗೂ ಮಹಿಳೆಯರು ಸ್ವ ಉದ್ಯೋಗವನ್ನು ಮಾಡುತ್ತಾ ಸ್ವಾವಲಂಬಿ ಜೀವನ ಮಾಡುವ ಸಲುವಾಗಿ ಹಲವು ಯೋಜನೆಗಳನ್ನು ಜಾರಿ ಮಾಡಲು ನಿರ್ಧಾರ ಮಾಡಲಾಗಿದೆ.. ಜೊತೆಗೆ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಕೂಡಾ ಹೆಚ್ಚು ಒತ್ತು ನೀಡಲಾಗುತ್ತಿದೆ..
ಮಹಿಳೆಯರು ಹಾಗೂ ಹೆಣ್ಣು ಮಕ್ಕಳಿಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ.. ಮಹಿಳೆಯರ ವಿವಿಧ ಯೋಜನೆಗಳಿಗಾಗಿ 3 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಅನುದಾನವನ್ನು ವಿನಿಯೋಗಿಸುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ..