Central Budget-2024; ಆಂಧ್ರಪ್ರದೇಶಕ್ಕೆ 15000 ಕೋಟಿ ಆರ್ಥಿಕ ನೆರವು!
ನವದೆಹಲಿ; ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಜನಸೇನಾ ಹಾಗೂ ಟಿಡಿಪಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಬಂಪರ್ ಕೊಡುಗೆ ಸಿಕ್ಕಿದೆ.. ಆಂಧ್ರಪ್ರದೇಶಕ್ಕೆ 15,000 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದೂ ಹೇಳಿದ್ದಾರೆ.
ಇದರ ಜೊತೆಗೆ ಆಂಧ್ರಪ್ರದೇಶ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಇಂಧನ, ರೈಲು, ರಸ್ತೆ ಅಭಿವೃದ್ಧಿಗಾಗಿ ಆದ್ಯತೆ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇತ್ತ ಆಂಧ್ರಪ್ರದೇಶದ ಪೋಲಾವರಂ ಪ್ರಾಜೆಕ್ಟ್ಗೆ ಕೇಂದ್ರ ಸರ್ಕಾರದಿಂದ ಅನುದಾನ ನೀಡಲಾಗುವುದು ಎಂದೂ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದರ ಜೊತೆಗೆ ಬಿಹಾರ ರಾಜ್ಯದಲ್ಲಿ ಹೊಸ ವಿಮಾನ ನಿಲ್ದಾಣ, ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ.