BusinessInternational

ಇಂಡೋ ರಷ್ಯಾ ಶೃಂಗಸಭೆ; 10ಕ್ಕೂ ಹೆಚ್ಚು ಒಪ್ಪಂದಗಳಿಗೆ ಸಹಿ ಸಾಧ್ಯತೆ

ನವದೆಹಲಿ: 21ನೇ ಇಂಡೋ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಭಾರತಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ಧತೆಗಳು ನಡೆದಿವೆ.

   ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ದ್ವಿಪಕ್ಷೀಯ ಸಂಬಂಧ ಮತ್ತು ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗೋಪಾಯಗಳು, ಅಂತಾರಾಷ್ಟ್ರೀಯ, ರಾಜಕೀಯ ಮತ್ತು ರಕ್ಷಣಾ ವಿಷಯಗಳ ಕುರಿತು ಚರ್ಚಿಸುವ ನಿರೀಕ್ಷೆಯಿದೆ.

  ಭಾರತ ಮತ್ತು ರಷ್ಯಾ ದೇಶಗಳ ನಡುವೆ ಸಂಪರ್ಕ, ಹಡಗು, ಬಾಹ್ಯಾಕಾಶ, ಮಿಲಿಟರಿ-ತಾಂತ್ರಿಕ ಸಹಕಾರ, ವಿಜ್ಞಾನ ಮತ್ತು ತಂತ್ರಜ್ಞಾನ, ಶಿಕ್ಷಣ ಮತ್ತು ಸಂಸ್ಕೃತಿ ಸೇರಿದಂತೆ 10ಕ್ಕೂ ಹೆಚ್ಚು ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಯಿದೆ. ಇದರ ಜತೆಗೆ, ಉಭಯ ದೇಶಗಳು 7.5 ಲಕ್ಷ AK-203 ಅಸಾಲ್ಟ್ ರೈಫಲ್‌ಗಳನ್ನು ಪೂರೈಸುವ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ.

Share Post