10 ಸಾವಿರ ಉದ್ಯೋಗಿಗಳನ್ನು ನೇಮಿಸಲಿದೆ SBI
ನವದೆಹಲಿ; ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸುಮಾರು 10 ಸಾವಿರ ಉದ್ಯೋಗಿಗಳ ನೇಮಕಕ್ಕೆ ಸಿದ್ಧತೆ ನಡೆಸಿದೆ.. ಪ್ರಸಕ್ತ ಹಣಕಾಸು ವರ್ಷದಲ್ಲಿ 10 ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಿದ್ದು, ಶೀಘ್ರದಲ್ಲೇ ಈ ಬಗ್ಗೆ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.. ಬ್ಯಾಂಕಿಂಗ್ ಸೇವೆಯನ್ನು ಗ್ರಾಹಕರಿಗೆ ಇನ್ನಷ್ಟು ಸುಲಭ ಮಾಡುವುದು ಹಾಗೂ ತಂತ್ರಜ್ಞಾನವನ್ನು ಮತ್ತಷ್ಟು ಉತ್ತಮಪಡಿಸುವುದಕ್ಕಾಗಿ ಈ ನೇಮಕಾತಿ ಮಾಡಲಾಗುತ್ತಿದೆ..
ಬ್ಯಾಂಕಿಂಗ್ ನಲ್ಲಿ ಡಿಜಿಟಲ್ ಸೇವೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅರ್ಹ ಉದ್ಯೋಗಿಗಳನ್ನು ಎಸ್‌ಬಿಐ ನೇಮಿಸಿಕೊಳ್ಳುತ್ತಿದೆ.. ಈ ಕಾರಣಕ್ಕಾಗಿ ಎಸ್‌ಬಿಐ ಬ್ಯಾಂಕ್ ತಂತ್ರಜ್ಞಾನ ವಿಭಾಗದಲ್ಲಿ ಹೂಡಿಕೆ ಪ್ರಮಾಣವನ್ನು ಹೆಚ್ಚಿಸುತ್ತಿದೆ.. ಅರ್ಹ ತಂತ್ರಜ್ಞಾನ ಎಕ್ಸ್‌ಪರ್ಟ್‌ಗಳನ್ನು ನೇಮಕ ಮಾಡಿಕೊಂಡು ಬ್ಯಾಂಕಿಂಗ್ ಸೇವೆಯನ್ನು ಮತ್ತಷ್ಟು ಸುಲಭಗೊಳಿಸಲಾಗುತ್ತದೆ.. ಇದು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿದ್ದು, ಅತ್ಯಂತ ವಿಶ್ವಾಸಾರ್ಹ ಬ್ಯಾಂಕಾಗಿದೆ..