ಗಾಂಜಾ ಕೇಸ್ಗೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳು ಅರೆಸ್ಟ್
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಮನೆ ಬಳಿ ಭದ್ರತೆಯಲ್ಲಿದ್ದ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಾಂಜಾ ಮಾರಾಟ ಜಾಲಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಗಾಂಜಾ ಕೇಸ್ನಲ್ಲಿ ಓರ್ವ ಮಹಿಳಾ ಆರೋಪಿ ಸೇರಿದಂತೆ ಮೂವರು ಪೆಡ್ಲರ್ಗಳನ್ನಿ ವಶಕ್ಕೆ ಪಡೆಯಲಾಗಿದೆ. ಒಡಿಸ್ಸಾ ಮೂಲದ ಪೂಜಾ, ಸೋಮಸುಂದರಂ, ಶಿವಪಾಟೀಲ್ ಎಂಬುವವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ ಆರು ಕಿಲೋ ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಕಾಲೇಜುಗಳ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ. ಈ ಹಿಂದೆ ಇಬ್ಬರನ್ನು ಗಾಂಜಾ ಡೀಲ್ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಇದುವರೆಗೂ ಒಂಭತ್ತು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.