CinemaHealth

ನಟಿ ಅರುಂಧತಿ ನಾಯರ್‌ಗೆ ಅಪಘಾತ; ತಲೆಗೆ ಪೆಟ್ಟು ಬಿದ್ದು ಪರಿಸ್ಥಿತಿ ಚಿಂತಾಜನಕ

ತಿರುವನಂತಪಪುರಂ; ಮಲಯಾಳಂನ ಜನಪ್ರಿಯ ನಟಿ ಅರುಂಧತಿ ನಾಯರ್ ರಸ್ತೆ ಅಪಘಾತಕ್ಕೀಡಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ತಲೆಗೆ ತೀವ್ರ ಪೆಟ್ಟಾಗಿರುವುದರಿಂದ ನಟಿ ಅರುಂಧತಿ ಅವರು ಸ್ಥಿತಿ ಗಂಭೀರವಾಗಿದ್ದು, ಕೇರಳದ ತಿರುವನಂತಪುರಂನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ; ಬಿಜೆಪಿಯಲ್ಲಿ ಭಿನ್ನಮತದ ಜ್ವಾಲೆ; 9 ಕ್ಷೇತ್ರಗಳಲ್ಲಿ ಬಂಡಾಯ ಭೀತಿ!

ನಟಿ ಅರುಂಧತಿ ನಾಯರ್‌ ಅವರನ್ನು ಐಸಿಯುನಲ್ಲಿಟ್ಟು ವೆಂಟಿಲೇಟರ್‌ ಮೂಲಕ ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದ್ದು, ಅವರ ಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ. ಮೂರು ದಿನಗಳ ಹಿಂದೆ ಈ ಅಪಘಾತ ಸಂಭವಿಸಿದ್ದು, ನಟಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ..

 

ಇದನ್ನೂ ಓದಿ; ಈಶ್ವರಪ್ಪ ನಿರ್ಧಾರ ಅಚಲ; ಮೋದಿ ಕಾರ್ಯಕ್ರಮದ ಗಣ್ಯರ ಪಟ್ಟಿಯಿಂದ ಕೊಕ್‌

ಯೂಟ್ಯೂಬ್ ಚಾನೆಲ್‌ ಒಂದಕ್ಕೆ ಸಂದರ್ಶನ ನೀಡಿದ ನಂತರ ನಟಿ ಅರುಂಧತಿ ಅವರು ಮತ್ತು ಅವರ ಸಹೋದರ ಸ್ಕೂಟಿಯಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಕೋವಲಂ ಬಳಿ ವೇಗವಾಗಿ ಬಂದ ಕಾರು ಅವರ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಅರುಂಧತಿ ಅವರು ಪ್ರಸ್ತುತ ತಿರುವನಂತಪುರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರಾವಾಹಿ ನಟಿ ಗೋಪಿಕಾ ಅನಿಲ್ ಅವರು ಅರುಂಧತಿ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲು ಆರ್ಥಿಕ ನೆರವು ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡುತ್ತಿದ್ದಾರೆ.

ಇದನ್ನೂ ಓದಿ; ಮತದಾರನ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸುವುದು ಹೇಗೆ.?; ಮತದಾನಕ್ಕೆ ಯಾರು ಅರ್ಹರು..?

ನನ್ನ ಸ್ನೇಹಿತೆ ಅರುಂಧತಿ ಅಪಘಾತಕ್ಕೀಡಾಗಿದ್ದಾಳೆ. ಆಕೆಯ ಸ್ಥಿತಿ ಗಂಭೀರವಾಗಿದೆ. ಸದ್ಯ ಆಕೆ ವೆಂಟಿಲೇಟರ್‌ನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಆಕೆಯ ಕುಟುಂಬಕ್ಕೆ ದಿನನಿತ್ಯದ ಆಸ್ಪತ್ರೆ ವೆಚ್ಚ ಭರಿಸಲು ಸಾಧ್ಯವಾಗುತ್ತಿರಲಿಲ್ಲ. ನಾವು ನಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದೇವೆ. ಆದರೆ ಇದೀಗ ಆಕೆಯ ಚಿಕಿತ್ಸೆಗೆ ಇದು ಸಾಕಾಗುವುದಿಲ್ಲ. ಆಕೆಯ ಕುಟುಂಬಕ್ಕೆ ತುಂಬಾ ಸಹಕಾರಿಯಾಗಲು ನೀವೂ ಸಹಾಯ ಮಾಡಿದರೆ, ಆಕೆಗೆ ಉತ್ತಮ ಚಿಕಿತ್ಸೆ ನೀಡಲು ಸಹಾಯವಾಗುತ್ತದೆ’ ಎಂದು ಇನ್ಸ್ಟಾ ಪೋಸ್ಟ್‌ನಲ್ಲಿ ಬ್ಯಾಂಕ್ ಮತ್ತು ಫೋನ್ ಸಂಖ್ಯೆ ವಿವರಗಳನ್ನು ಸೇರಿಸಲಾಗಿದೆ.

ಇದನ್ನೂ ಓದಿ; ಮಾಜಿ ಸಿಎಂಗೆ ಕಾಂಗ್ರೆಸ್‌ ನಾಯಕರ ಗಾಳ; ನಾಳೆ ʻಉತ್ತರʼ ಎಂದ ಸದಾನಂದಗೌಡ!

Share Post