CinemaCrime

ನಟ ಧ್ರುವ ಸರ್ಜಾ ಜಿಮ್‌ ಟ್ರೈನರ್‌ ಮೇಲೆ ತೀವ್ರ ಹಲ್ಲೆ!

ಬೆಂಗಳೂರು;  ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾ ಅವರ  ಜಿಮ್ ಟ್ರೈನರ್ ಪ್ರಶಾಂತ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.. ಬನಶಂಕರಿಯ ಕೆ.ಆರ್.ರಸ್ತೆಯಲ್ಲಿ ಅಪರಿಚಿತರಿಂದ ಹಲ್ಲೆ ನಡೆದಿದ್ದು, ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ..

ನಿನ್ನೆ ರಾತ್ರಿ ಜಿಮ್ ಟ್ರೈನರ್ ಪ್ರಶಾಂತ್ ಮೇಲೆ ದಾಳಿ ಮಾಡಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ..  ಗಾಯಗೊಂಡಿರುವ ಪ್ರಶಾಂತ್‌, ನಟ ಧ್ರುವ ಸರ್ಜಾ ಮನೆ ಹತ್ತಿರದ ಅಕ್ಷಯ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಅವರಿಗೆ ಚಿಕಿತ್ಸೆ ಮುಂದುವರೆದಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ..

ಈ ಬಗ್ಗೆ ಧ್ರುವ ಸರ್ಜಾ ಅವರ ಮ್ಯಾನೇಜರ್‌ ಮಾತನಾಡಿದ್ದು, ಜಿಮ್ ಟ್ರೈನರ್ ಪ್ರಶಾಂತ್ ಮೇಲೆ ಹಲ್ಲೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.. ನಟ ಧ್ರುವಾ ಸರ್ಜಾಗೆ ಈ ಬಗ್ಗೆ ಯಾವ ಮಾಹಿತಿನೂ ಇಲ್ಲ. ಖಾಸಗಿ ವಿಚಾರಕ್ಕೆ ಸಂಬಂಧಪಟ್ಟಂತೆ ಹಲ್ಲೆ ಆಗಿರುವ ಬಗ್ಗೆ ಮಾಹಿತಿ ಇದೆ ಎಂದು ಅವರು ಸ್ಪಷ್ಟನೆ ಕೊಟ್ಟಿದ್ದಾರೆ.. ಇದಕ್ಕೂ ಮುಂಚೆಯೂ ಎರಡು ಸಲ ಪ್ರಶಾಂತ್ ಮೇಲೆ ಹಲ್ಲೆ ಯತ್ನ ನಡೆದಿತ್ತು ಎನ್ನಲಾಗಿದೆ..

 

Share Post