ತನ್ನದೇ ಕಾಲಿಗೆ ಗನ್‌ನಿಂದ ಶೂಟ್ ಮಾಡಿಕೊಂಡ ನಟ ಗೋವಿಂದ!
ಮುಂಬೈ; ಬಾಲಿವುಡ್ ನಟ ಗೋವಿಂದ ಅವರು ತಮ್ಮದೇ ಕಾಲಿಗೆ ಗನ್‌ನಿಂದ ಶೂಟ್ ಮಾಡಿಕೊಂಡಿದ್ದಾರೆ.. ಮುಂಬೈನ ಮನೆಯಲ್ಲಿ ಈ ಘಟನೆ ನಡೆದಿದ್ದು, ಅವರ ಕಾಲಿಗೆ ತೀವ್ರ ಗಾಯವಾಗಿದೆ.. ಹೀಗಾಗಿ ನಟ ಗೋವಿಂದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ..
ಗೋವಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.. ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.. ಯಾಕೆ ಹೀಗೆ ನಡೆಯಿತೋ ಗೊತ್ತಿಲ್ಲ.. ಮಿಸ್ ಫೈರ್ ಆಗಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.