CinemaHealthPolitics

ನಟಿ ಹಾಗೂ ಆಂಧ್ರ ಸಚಿವೆ ರೋಜಾ ಆಸ್ಪತ್ರೆಗೆ ದಾಖಲು

ಚೆನ್ನೈ;  ಆಂಧ್ರಪ್ರದೇಶದ ಪ್ರವಾಸೋದ್ಯಮ ಸಚಿವೆ ರೋಜಾ ಅವರು ಅನಾರೋಗ್ಯದ ಕಾರಣ ಕಳೆದ ಶುಕ್ರವಾರ ರಾತ್ರಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಕಾಏಕಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ವೈಸಿಪಿ ನಾಯಕರು ಹಾಗೂ ಅಭಿಮಾನಿಗಳಲ್ಲಿ ಆತಂಕ ವ್ಯಕ್ತವಾಗಿದೆ. ಆದರೆ, ರೋಜಾ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಎರಡು ದಿನ ಆಸ್ಪತ್ರೆಯಲ್ಲಿಯೇ ಇರುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಸಚಿವೆ ರೋಜಾ ಕೆಲ ದಿನಗಳಿಂದ ಸಯಾಟಿಕಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬೆನ್ನು ನೋವು ಹಾಗೂ ಕಾಲು ಊತದಿಂದ ಶುಕ್ರವಾರ ರಾತ್ರಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ರೋಜಾ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಇದಕ್ಕೂ ಮುನ್ನ ಈ ಸಮಸ್ಯೆಗೆ ಚೆನ್ನೈ ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಈಗ ಮತ್ತೆ ನೋವು ಉಲ್ಬಣಗೊಂಡಿದ್ದರಿಂದ ಮನೆಯಲ್ಲೇ ಇದ್ದು ಫಿಸಿಯೋಥೆರಪಿ ಮಾಡಿಸಿಕೊಳ್ಳುತ್ತಿದ್ದರು. ಆದರೆ, ಶುಕ್ರವಾರ ರಾತ್ರಿ ನೋವು ಕಡಿಮೆಯಾಗದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

Share Post