Cinema

ಹರಿಯಾಣ ಬಿಜೆಪಿ ನಾಯಕಿ, ನಟಿ ಸೊನಾಲಿ ಫೋಗಟ್‌ ನಿಧನ

ಪಣಜಿ; ಬಿಜೆಪಿ ನಾಯಕಿ ಹಾಗೂ ನಟಿ ಸೊನಾಲಿ ಫೋಗಟ್‌ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹರಿಯಾಣ ಬಿಜೆಪಿ ನಾಯಕಿ ಸೊನಾಲಿ ಫೋಗಟ್‌ ಗೋವಾದಲ್ಲಿ ಸಾವನ್ನಪ್ಪಿರುವುದನ್ನು ಅಲ್ಲಿನ ಪೊಲೀಸರು ಖಚಿತಪಡಿಸಿದ್ದಾರೆ.

ಟಿಕ್‌ಟಾಕ್‌ನಲ್ಲಿ ಭಾರಿ ಸದ್ದು ಮಾಡಿದ್ದ ಸೊನಾಲಿ ಅವರು 2019ರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹಿಸಾರ್‌ ಜಿಲ್ಲೆಯ ಆದಂಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಅವರು ಕುಲ್‌ದೀಪ್‌ ಬಿಷ್ಣೋಯಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು. ಆದರೆ, ಚುನಾವಣಾ ಕಣದಲ್ಲಿ ಭಾರಿ ಸದ್ದು ಮಾಡಿದ್ದರು. ಟಿಕ್ ಟಾಕ್‌ನಲ್ಲಿ ಜನಪ್ರಿಯರಾಗಿದ್ದ ಸೊನಾಲಿ ಫೋಗಟ್‌, 14ನೇ ಆವೃತ್ತಿಯ ‘ಬಿಗ್‌ಬಾಸ್’ ರಿಯಾಲಿಟಿ ಶೋದಲ್ಲಿ ಸ್ಪರ್ಧಿಸಿದ್ದರು.

Share Post