CinemaHealth

ಬಾಲಿವುಡ್‌ ನಟಿ ಪೂನಂ ಪಾಂಡೆ ಗರ್ಭಕೋಶ ಕ್ಯಾನ್ಸರ್‌ಗೆ ಬಲಿ!

ಕಾನ್ಪುರ; ಬಾಲಿವುಡ್‌ ನಟಿ ಹಾಗೂ ಮಾಡೆಲ್‌ ಪೂನಂ ಪಾಂಡೆ ನಿಧನರಾಗಿದ್ದಾರೆ. ಗರ್ಭಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪೂನಂ ಪಾಂಡೆ ಇಂದು ಬೆಳಗ್ಗೆ ಇಹಲೋಕತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ. ಉತ್ತರ ಪ್ರದೇಶದ ಕಾನ್ಪುರದ ಅವರ ನಿವಾಸದಲ್ಲೇ ಪೂನಂ ಪಾಂಡೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಪೂನಂ ಪಾಂಡೆ ಅವರಿಗೆ 32 ವರ್ಷ ವಯಸ್ಸಾಗಿತ್ತು. ಹಲವು ತಿಂಗಳಿಂದ ಅವರು ಗರ್ಭಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಹಲವಾರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೂ ವೈದ್ಯರು ಕೈಚೆಲ್ಲಿದ್ದರಿಂದ ಅವರು ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

 

Share Post