Cinema

RRR ಕನ್ನಡ ವರ್ಷನ್‌ ವಿವಾದ; ಸಿನಿಮಾ ನಿರ್ಮಾಪಕರು ಹೇಳೋದು ಏನು..?

ಹೈದರಾಬಾದ್‌: ಆರ್‌ಆರ್‌ಆರ್‌ ಸಿನಿಮಾದ ಕನ್ನಡ ವರ್ಷನ್‌ ಹೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡದಿದ್ದಕ್ಕೆ ಕನ್ನಡಪ್ರೇಮಿಗಳು ಸಿಟ್ಟಾಗಿದ್ದಾರೆ. ಬಾಯ್ಕಾಟ್‌ ಆರ್‌ಆರ್‌ಆರ್‌ ಮೂವಿ ಎಂಬ ಹ್ಯಾಷ್‌ ಟ್ಯಾಗ್‌ ಟ್ವಿಟರ್‌ನಲ್ಲಿ ಭಾರಿ ಟ್ರೆಂಡಿಂಗ್‌ ಆಗಿದೆ. ಆರ್‌ಆರ್‌ಆರ್‌ ಚಿತ್ರದ ನಿರ್ಮಾಪಕರು ಸಮಜಾಯಿಷಿ ನೀಡಿದ್ದಾರೆ. ಮಾರ್ಚ್‌ 25 ರಂದು ಯಾಕೆ ಕರ್ನಾಟಕದಲ್ಲಿ ಹೆಚ್ಚಿನ ಚಿತ್ರಮಂದಿರಗಳಲ್ಲಿ ಕನ್ನಡ ಅವತರಣಿಕೆ ಬಿಡುಗಡೆಯಾಗುತ್ತಿಲ್ಲ ಎಂಬುದಕ್ಕೆ ಉತ್ತರ ಕೊಟ್ಟಿದ್ದಾರೆ. ಇದಕ್ಕೆ ಕಾರಣ ಕರ್ನಾಟಕದ ಚಿತ್ರಮಂದಿರಗಳ ಮಾಲೀಕರೇ ಎಂದು ಅವರು ಆರೋಪ ಮಾಡಿದ್ದಾರೆ.

ಆರ್‌ಆರ್‌ಆರ್‌ ಸಿನಿಮಾ ನಿರ್ಮಾಪಕರು ಕೊಟ್ಟಿರುವ ಸಾರಾಂಶದ ವಿವರ ಇಲ್ಲಿದೆ.

ನಿಮಗೆ ತಿಳಿದಿರುವಂತೆ, ಆರ್‌ಆರ್‌ಆರ್‌ ಮಾರ್ಚ್‌ 25 ರಂದು ತೆರೆಗೆ ಬರಲು ಸಿದ್ಧವಾಗಿದೆ. ಆರ್‌ಆರ್‌ಆರ್‌ ನಾಯಕ ನಟರಾದ ರಾಮ್‌ ಚರಣ್‌ ಮತ್ತು ಜ್ಯೂನಿಯರ್‌ ಎನ್‌ಟಿಆರ್‌ ಕನ್ನಡ ಕಲಿಯಲು ವಿಶೇಷ ಪ್ರಯತ್ನಗಳನ್ನು ಮಾಡಿ, ಮೊದಲ ಬಾರಿಗೆ ತಮ್ಮದೇ ಧ್ವನಿಯಲ್ಲಿ ಡಬ್‌ ಮಾಡಿದ್ದಾರೆ. ನೀವು ಕನ್ನಡ ಭಾಷೆಯಲ್ಲಿ ಈ ಮಹೋನ್ನತ ದೃಶ್ಯಕಾವ್ಯವವನ್ನು ನೋಡಲು ಇಷ್ಟಪಡುತ್ತೀರಿ ಎಂದು ನಾವು ಭಾವಿಸಿದ್ದೇವೆ. ಆದ್ದರಿಂದ, ಆರ್‌ಆರ್‌ಆರ್‌ ಸಿನಿಮಾವನ್ನು ಕನ್ನಡದಲ್ಲಿ ಪ್ರದರ್ಶಿಸಲು ಹಿಂದೇಟು ಹಾಕುತ್ತಿರುವ (ಪ್ರದರ್ಶಕರ) ಥಿಯೇಟರ್‌ ಮಾಲೀಕರ ಮನವೊಲಿಸುವ ಕಾರ್ಯ ನಡೆಯುತ್ತಿದೆ. ಕನ್ನಡದ ಅವತರಣಿಕೆಯನ್ನು ಹೆಚ್ಚಿನ ಸ್ಕ್ರೀನ್‌ಗಳಲ್ಲಿ ಬಿಡುಗಡೆ ಮಾಡಲು ಎಲ್ಲಾ ಪ್ರಯತ್ನಗಳನ್ನೂ ನಾವು ಸತತವಾಗಿ ಮಾಡುತ್ತಿದ್ದೇವೆ. ಈ ಬಗ್ಗೆ ನಾಳೆಯೊಳಗೆ ಎಲ್ಲಾ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಆರ್‌ಆರ್‌ಆರ್‌ ಕನ್ನಡ ಅವತರಣಿಕೆಯನ್ನು ವೀಕ್ಷಿಸುವ ಮೂಲಕ ಹಾಗೂ ರಾಜ್ಯಾದ್ಯಂತ ಹೆಚ್ಚಿನ ಪರದೆಗಳಲ್ಲಿ ಕನ್ನಡದ ಆವೃತ್ತಿಯನ್ನೇ ಬಿಡುಗಡೆ ಮಾಡೋದಕ್ಕೆ ನಮಗೆ ನೀವು ಸಹಾಯ ಮಾಡುತ್ತೀರಿ, ನಮ್ಮನ್ನು ಬೆಂಬಲಿಸುತ್ತೀರಿ ಎಂದು ನಾವು ಭಾವಿಸುತ್ತೇವೆ.

ಇಂತಿ ಕೆವಿಎನ್‌ ಪ್ರೊಡಕ್ಷನ್ಸ್‌

Share Post