ನಾದಬ್ರಹ್ಮ ಹಂಸಲೇಖ ಆಸ್ಪತ್ರೆಗೆ ದಾಖಲು
ಬೆಂಗಳೂರು; ನಾದಬ್ರಹ್ಮ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಬೇರೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಹಂಸಲೇಖ ಅವರಿಗೆ ಓಪನ್ ಹಾರ್ಟ್ ಸರ್ಜರಿ ಆಗಿತ್ತು. ಆದರೆ ಸದ್ಯ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಅವರಿಗೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಸದ್ಯ ರಾಜಾಜಿನಗರ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನರಲ್ ವಾರ್ಡ್ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.