ಎಂಇಎಸ್ ಪುಂಡಾಟಿಕೆ ವಿರುದ್ಧ ಸಿಡಿದೆದ್ದ ಸಿಎಂ ಬೊಮ್ಮಾಯಿ
ಬೆಳಗಾವಿ: ಕನ್ನಡ ಬಾವುಟವನ್ನು ಸುಟ್ಟು, ಬೆಳಗಾವಿಯಲ್ಲಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ, ಪ್ರತಿಮೆಗಳನ್ನು ಧ್ವಂಸ ಮಾಡಿರುವ ಎಂಇಎಸ್ ಪುಂಡರಿಗೆ ಸಿಎಂ ಬಸವರಾಜ್ ಬೊಮ್ಮಾಯಿಯವರು ಖಡಕ್ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಪುಂಡಾಟಿಕೆ ವಿರುದ್ಧ ಟ್ವೀಟ್ ಮಾಡಿರುವ ಸಿಎಂ ʻಬೆಳಗಾವಿಯಲ್ಲಿ ನಡೆದಿರುವ ಪುಂಡಾಟಿಕೆ ಖಮಡನೀಯ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಸೂಚನೆ ಕೂಡಾ ನೀಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹಲವರನ್ನು ಈಗಾಗಲೇ ಬಂಧಿಸಲಾಗಿದೆ. ಕಲ್ಲು ತೂರಾಟ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಕಾನೂನು ಬಾಹಿರ.
ಇಂತಹ ಘಟನೆ ಮರುಕಳಿಸದಂತೆ ದೀರ್ಘಾವಧಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ಜೊತೆಗೆ ರಾಷ್ಟ್ರಭಕ್ತರ ಪ್ರತಿಮೆಗಳನ್ನು ಹಾಳು ಮಾಡುವುದು ಸರಿಯಲ್ಲ, ದೇಶಕ್ಕಾಗಿ ತ್ಯಾಗ ಮಾಡಿದವರನ್ನು ಗೌರವಿಸಬೇಕು, ನಾಡಿಗೆ ಹೋರಾಡಿದವರ ಗೌರವ ಉಳಿಸಬೇಕು. ಸಮಾಜದಲ್ಲಿ ಕ್ಷೋಭೆ ಉಂಟುಮಾಡುವುದು ತಪ್ಪು. ಕೆಲವೇ ಕೆಲವು ಪುಡಾರಿಗಳು ಇಂತಕ ದುಷ್ಕೃತ್ಯಕ್ಕೆ ಕೈ ಹಾಕಿವೆ ಅವರನ್ನು ಸದೆಬಡಿಯುತ್ತೇವೆ ಎಂದು ದಿಟ್ಟ ಉತ್ತರ ನೀಡಿದ್ದಾರೆ.
ಇನ್ನು ಡಿಸೆಂಬರ್ 20ರವರೆಗೆ ಬೆಳಗಾವಿಯಲ್ಲಿ ನಿಷೇಧಾಜ್ಞೆ ಮುಂದುವರೆದಿದೆ. ಶಾಂತಿ ಸುವ್ಯವಸ್ಥೆಗೆ ಭಂಗವಾಗದಂತೆ ಖಾಕಿ ಕಟ್ಟೆಚ್ಚರ ವಹಿಸಿದೆ.